ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
7:37 PM

ಬ್ರಹ್ಮಕಲಶೋತ್ಸವ

Posted by ekanasu

ಫೆ.12-17: ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ವಿಟ್ಲ : ಸಹಕಾರ ತತ್ವದ ಜೀವ ನಾಡಿಯಾಗಿ ನೆಲ-ಜಲ ಸಂರಕ್ಷಣೆಯಲ್ಲಿ ಮಾದರಿ ಗ್ರಾಮವಾಗಿ ಗುರುತಿಸಲ್ಪಟ್ಟ ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಮತ್ತು ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ 17ರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರೂ, ಕ್ಯಾಂಪ್ಕೋ ಅಧ್ಯಕ್ಷರು ಆದ ಕೊಂಕೋಡಿ ಪಧ್ಮನಾಭ ತಿಳಿಸಿದ್ದಾರೆ.


ವಿಟ್ಲದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೃತ್ತಾಕಾರದ ಗರ್ಭಗುಡಿಯನ್ನು ಹೊಂದಿರುವ ಈ ದೇವಾಲಯವು ಕ್ರಿ.ಶ. 1816 ಇಸವಿಯಲ್ಲಿ ಸ್ಥಾಪನೆ ಹೊಂದಿರಬಹುದು ಎಂದು ಅಂದಾಜು ಮಾಡಲಾಗಿದೆ. ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಪವಿತ್ರ ಪಾಣಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಕೇಳತ್ತಾಯ ಕುಟುಂಬಸ್ಥರಿಗೆ ಇಡ್ಕಿದು ಗ್ರಾಮವನ್ನು ಉಂಬಳಿಯಾಗಿ ನೀಡಲಾಗಿತ್ತು. ಈ ಕುಟುಂಸ್ಥರು ಶ್ರೀ ಕ್ಷೇತ್ರ ಸುಬ್ರಹ್ಮಣ್ಯನನ್ನು ಕೈ ದೇವರಾಗಿ ಆವಾಹಿಸಿ ತಂದು ಕೋಲ್ಪೆಯಲ್ಲಿ ಪ್ರತಿಷ್ಠಾಪಿಸಿದರೆಂಬ ಐತಿಹ್ಯವಿದೆ. 12 ವರ್ಷಗಳ ಹಿಂದೆ ಈ ದೇವಸ್ಥಾನದ ಅಂದಿನ ಆಡಳಿತ ಮೊಕ್ತೇಸರರಾದ ಕ.ಶಿ. ವಿಶ್ವನಾಥರ ನೇತೃತ್ವದಲ್ಲಿ ಊರ ಸುತ್ತೂರುಗಳ ಹಾಗೂ ಪರವೂರ ಭಕ್ತಬಾಂಧವರೆಲ್ಲರ ಸಹಕಾರದೊಂದಿಗೆ ಅಷ್ಠಬಂಧ ಬ್ರಹ್ಮಕಲಶೋತ್ಸವ ಜರಗಿತ್ತು. ಇದೀಗ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ಹಿರಿತನದಲ್ಲಿ ಬ್ರಹ್ಮಕಲಶೋತ್ಸವವು ನಡೆಯಲಿದೆ. ಬ್ರಹ್ಮಕಲಶೋತ್ಸವದ ಪೂರ್ವ ಭಾವಿಯಾಗಿ ಸುಬ್ರಹ್ಮಣ್ಯ ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠೆ ಮಾಡಿ ದೇವರ ಪಾಣಿ ಪೀಠವನ್ನು ಹೊಸದಾಗಿ ನಿರ್ಮಿಸಲಾಗಿದೆ ಮತ್ತು ಶಾಸ್ತಾವು ದೇವರಿಗೆ ಪ್ರತ್ಯೇಕ ಗುಡಿ ರಚಿಸಲಾಗಿದೆ. ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಅವರು ಹೇಳಿದರು.

ವರದಿ: ಜ್ಯೋತಿಪ್ರಕಾಶ್ ಪುಣಚ

0 comments:

Post a Comment