ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
8:28 PM

ಖಂಡನೆ

Posted by ekanasu

ವಾರ್ತಾ ಭಾರತಿ ವರದಿಗಾರ ಆರೀಫ್ ಮಚ್ಚಂಪಾಡಿ ಮೇಲಿನ ಹಲ್ಲೆಗೆ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಖಂಡಿಸಿದ್ದಾರೆ.ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವಾರ್ತಾ ಭಾರತಿಯ ವರದಿಗಾರ, ಮಂಗಳೂರು ವಿ.ವಿ.ಯ ಎಂಎ ವಿದ್ಯಾರ್ಥಿ ಆರೀಫ್‌ ಮಚ್ಚಂಪಾಡಿ ಅವರಿಗೆ ವಿನಾ ಕಾರಣ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿದ ಕಿಡಿಗೇಡಿಗಳ ದುಷ್ಕೃತ್ಯವನ್ನು ಖಂಡಿಸಿರುವ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಆರೋಪಿಯ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದೆ.ಇತ್ತೀಚಿಗೆ ಪತ್ರಕರ್ತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಅತ್ಯಂತ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿದ್ದು ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕಾಂಗದ ಮೇಲೆ ನಡೆಯುತ್ತಿರುವ ಈ ರೀತಿಯ ದಾಳಿಗಳನ್ನು ತಡೆಯಲು ಒಂದು ಸೂಕ್ತ ಕಾನೂನು ರೂಪಿಸುವಂತೆ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘದ ಸಂಚಾಲಕ ಅಶ್ರಫ್ ಮಂಜ್ರಾಬಾದ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

0 comments:

Post a Comment