ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಬೆಂಗಳೂರು: ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸಿದ ಪ್ರಮೋದ್ ಮುತಾಲಿಕ್ ಮುಖಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮಸಿಬಳಿದು ಆಕ್ರೋಶವ್ಯಕ್ತಪಡಿಸಿದ ಘಟನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಶ್ರೀರಾಮ ಸೇನಾ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಹಲವೆಡೆಗಳಲ್ಲಿ ಬಂದ್ ಗೆ ಕರೆನೀಡಲಾಗಿದೆ. ಶ್ರೀರಾಮ ಸೇನೆಯ ಬಂದ್ ಗೆ ಮಿಶ್ರ ಪತ್ರಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗಿನಿಂದಲೇ ಮಂಗಳೂರು,ಹುಬ್ಬಳ್ಳಿ ಸೇರಿದಂತೆ ಹಲವಡೆಗಳಲ್ಲಿ ಬಸ್ಸುಗಳಿಗೆ ಕಲ್ಲುತೂರಾಟ ಸೇರಿದಂತೆ ತೀವ್ರ ಪ್ರತಿಭಟನೆ ಆರಂಭಗೊಂಡಿದೆ. ಮಂಗಳೂರಿನಲ್ಲಿ ಇದೀಗ ಬಂದ ಸುದ್ದಿಯಂತೆ ಮತ್ತೆರಡು ಬಸ್ಸುಗಳಿಗೆ ಕಲ್ಲುತೂರಾಟ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹಲವರನ್ನು ಬಂಧಿಸಿದ್ದು, ತೀವ್ರ ಬಂದೋಬಸ್ತ್ ನಡೆಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಅಹಿತಕರ ಘಟನೆಗಳು ನಡೆಯುವ ಮುನ್ಸೂಚನೆ ಸ್ಪಷ್ಟವಾಗಿದೆ.

0 comments:

Post a Comment