ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಶಾಲಾ ಸಮಯದಲ್ಲಿ ಮೊಬೈಲ್ ಬಳಸುವ ಶಿಕ್ಷಕರ ವಿರುದ್ದ ಕ್ರಮ : ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು: ಶಾಲಾ ಸಮಯದಲ್ಲಿ ಮೊಬೈಲ್ ಬಳಸುವ ಶಿಕ್ಷಕರ ವಿರುದ್ದ ಕ್ರಮಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು.ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಇಂದು ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಸಚಿವರು ಒಂದನೇ ತರಗತಿಯಿಂದ ಪದವಿಪೂರ್ವಕಾಲೇಜಿನ ಶಿಕ್ಷಕರು ಹಾಗೂ ಉಪನ್ಯಾಸಕರು ಶಾಲಾ ಅವಧಿಯಲ್ಲಿ ಮೊಬೈಲ್ ಬಳಸುವುದರಿಂದ ಶೈಕ್ಷಣಿಕ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಉಂಟಾಗಿ ಮಕ್ಕಳಿಗೆ ತೊಂದರೆಯಾಗಲಿದೆ, ಆದ್ದರಿಂದ ಮೊಬೈಲ್ ನಿಷೇಧಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸುತ್ತೊಲೆ ಹೊರಡಿಸಲಾಗಿದೆ ಎಂದರು.
ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಹಾಜರಾತಿ ಧೃಢೀಕರಿಸಲು ಸುಧಾರಣಾ ಕ್ರಮ ಕೈಗೊಳ್ಳುವ ಸಂಬಂಧ ಇನ್ನು ಮುಂದೆ ತರಗತಿಗೆ ಹಾಜರಾದ ವಿದ್ಯಾರ್ಥಿಗಳಿಗೆ ಹಾಜರಾತಿ ಪುಸ್ತಕದಲ್ಲಿ 'ಹಾ ' ಎಂದು ತರಗತಿಗೆ ಹಾಜರಾಗದ ವಿದ್ಯಾರ್ಥಿಗೆ 'ಗೈರು' ಎಂದು ನಮೂದಿಸಲು ಸೂಚಿಸಲಾಗಿದ್ದು ಇದರಿಂದ ಹಾಜರಾತಿ ವಿಷಯದಲ್ಲಿ ನಡೆಯಬಹುದಾದ ಅವ್ಯವಹಾರ ತಡೆಗಟ್ಟಲು ಅನುಕೂಲವಾಗಲಿದೆ ಎಂದ ಸಚಿವರು ಈ ಸಂಬಂಧ ಸಧ್ಯದಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದರು.

ಮುಂಬರುವ ಶೈಕ್ಷಣಿಕ ವರ್ಷದಿಂದ ಲ್ಯಾಮಿನೇಷನ್ನೊಂದಿಗೆ ಉತ್ತಮ ಗುಣಮಟ್ಟದ ಪಠ್ಯಪುಸ್ತಕಗಳನ್ನು ಪೂರೈಸಲು ಕ್ರಮಕೈಗೊಳ್ಳಲಾಗಿದೆ ಎಂದ ಸಚಿವರು ಪುಸ್ತಕ ಮುದ್ರಣಕ್ಕೆ ಉತ್ತಮ ದರ್ಜೆಯ ಪೇಪರ್ ಬಳಸಲಿದ್ದು ಸುಮಾರು 3.25 ಕೋಟಿ ಪುಸ್ತಕಗಳನ್ನು ಮುದ್ರಿಸಲಾಗುತ್ತಿದ್ದು ಇದಕ್ಕಾಗಿ 65 ಕೋಟಿ ರೂ. ಖರ್ಚಾಗಲಿದೆ, ಶಾಲೆಗಳು ಪ್ರಾರಂಭಕ್ಕೆ ಮುನ್ನವೆ ಪುಸ್ತಕಗಳ ವಿತರಣೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವರು ಪತ್ರಕರ್ತರಿಗೆ ತಿಳಿಸಿದರು.

0 comments:

Post a Comment