ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ಮಂಗಳೂರು :ಮಾರ್ಚ್ 2ರ ರಾತ್ರಿ ಮಂಗಳೂರಿನಿಂದ ಪ್ರಕಟಗೊಳ್ಳುತ್ತಿರುವ ಕನ್ನಡ ಪ್ರಭ ಹಾಗೂ ಜಯಕಿರಣ ಕನ್ನಡ ದೈನಿಕಗಳ ಕಚೇರಿಗಳಿಗೆ ಮುಸುಕುದಾರಿ ದುಷ್ಕರ್ಮಿಗಳು ದಾಳಿ ನಡೆಸಿ ಪೆಟ್ರೋಲ್ ಬಾಂಬ್ ,ಕಲ್ಲು ಎಸೆದು ಹಾನಿಗೊಳಿಸಿ ಸಿಬಂದಿಗಳಿಗೆ ಜೀವಬೆದರಿಕೆ ಒಡ್ಡಿರುವ ಘಟನೆಯನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದೆ.
ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಪೊಲೀಸ್ ಇಲಾಖೆಯನ್ನು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಗ್ರಹಿಸಿದ್ದು ,ಈ ಬಗ್ಗೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಹಾಗೂ ಮಂಗಳೂರು ನಗರ ಪೊಲೀಸ್ ಕಮಿಷನರ್ ಗೋಪಾಲ್ ಬಿ ಹೊಸೂರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಬ್ರಹ್ಮಣ್ಯೇಶ್ವರ ರವ್ ರವರಿಗೆ ಸಂಘದ ನಿಯೋಗ ಮನವಿಯನ್ನು ಸಲ್ಲಿಸಿದೆ . ನಿಯೋಗದಲ್ಲಿ ಸಂಘದ ಉಪಾಧ್ಯಕ್ಷರಾದ ರಾಮಕೃಷ್ಣ ಆರ್. ವೆಂಕಟೇಶ್ ಬಂಟ್ವಾಳ್, ಪ್ರಧಾನ ಕಾರ್ಯದರ್ಶಿ ಗುರುವಪ್ಪ ಎನ್ ಟಿ ಬಾಳೇಪುಣಿ, ನಿಕಟಪೂರ್ವ ಅಧ್ಯಕ್ಷ ಬಿ.ರವೀಂದ್ರ ಶೆಟ್ಟಿ, ಕೋಶಾಧಿಕಾರಿ ಯೋಗೀಶ್ ಹೊಳ್ಳ, ಪ್ರೆಸ್ಕ್ಲಬ್ ಪ್ರಧಾನ ಕಾರ್ಯದರ್ಶಿ ಪಿ.ಬಿ.ಹರಿಪ್ರಸಾದ್ ರೈ ಮುಂತಾದವರು ಉಪಸ್ಥಿತರಿದ್ದರು.

0 comments:

Post a Comment