ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ರಿಯಾದ್ : ಮಂಗಳೂರಿನಲ್ಲಿ ಜಯಕಿರಣ ಮತ್ತು ಕನ್ನಡ ಪ್ರಭ ಪತ್ರಿಕಾ ಕಛೇರಿಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದೆ.ಕನ್ನಡ ಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ಬುರ್ಖಾ ಲೇಖನದ ವಿರುದ್ಧ ಆರೋಗ್ಯ ಪೂರ್ಣ ಚರ್ಚೆ ನಡೆಸಿ ಪರಿಹಾರ ಕಂಡು ಕೊಳ್ಳುವ ಬದಲು ಕಾನೂನನ್ನು ಕೈಗೆತ್ತಿ ಪ್ರತಿಭಟಿಸುವುದು ಸರಿಯಲ್ಲ. ಈ ಲೇಖನದ ಬಗ್ಗೆ ಈಗಾಗಲೇ ಕನ್ನಡ ಪ್ರಭ ಪತ್ರಿಕೆಯ ಸಂಪಾದಕರು ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಹೀಗಿದ್ದೂ ಶಾಂತಿಯನ್ನು ಕೆಡಿಸುವ ಉದ್ದೇಶದಿಂದ ಮತ್ತೆ ಈ ದಾಳಿ ನಡೆದಿದೆ. ಈ ಬಗ್ಗೆ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಪತ್ರಕರ್ತರಿಗೆ ಹಾಗೂ ಪತ್ರಿಕಾ ಕಚೇರಿಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘದ ಸಂಚಾಲಕ ಅಶ್ರಫ್ ಮಂಜ್ರಾಬಾದ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

0 comments:

Post a Comment