ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ಮಂಗಳೂರು: ಸರಕಾರದಿಂದ ದೊರೆಯುವ ಸೌಲಭ್ಯಗಳ ಸದ್ಬಳಕೆ ಅದನ್ನು ಜನರ ಅಭಿವೃದ್ಧಿಗೆ ಹೇಗೆ ಬಳಸಿಕೊಳ್ಳಬೇಕೆಂಬುದಕ್ಕೆ ನಾರಾವಿ ಜಿಲ್ಲಾ ಪಂಚಾಯತ್ ಕ್ಷೇತ್ರ ಮಾದರಿ ಎಂದು ಶಾಸಕ ಕೆ. ವಸಂತ ಬಂಗೇರ ಅವರು ಹೇಳಿದರು.ಅವರು ಮಾರ್ಚ್ 9ರಂದು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಗ್ರಾಮಪಂಚಾಯತ್ ಕಾಶಿಪಟ್ಣದ ಸಂಯುಕ್ತ ಆಶ್ರಯದಲ್ಲಿ ನಿರ್ಮಿಸಲಾದ ಕಾಶಿಪಟ್ಣ ರಸ್ತೆ ಹಾಗೂ ಸೇತುವೆ ಉದ್ಘಾಟನೆ ಮತ್ತು ಸರಕಾರಿ ಪ್ರೌಢಶಾಲೆಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.
ಮೂರು ಕೋಟಿ 68.50 ಲಕ್ಷದಡಿ ನಿರ್ಮಿಸಿದ ಗ್ರಾಮೀಣ ಸೇತುವೆ ಹಾಗೂ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಸರಕಾರಿ ಪ್ರೌಢಶಾಲಾ ನೂತನ ಕಟ್ಟಡದ ಗುಣಮಟ್ಟದ ಬಗ್ಗೆ ಹಾಗೂ ಸರಕಾರ ರೂಪಿಸಿರುವ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪಂಚಾಯಿತಿಗಳು ಸಕ್ರಿಯವಾಗಿ ಕರ್ತವ್ಯ ನಿರ್ವಹಿಸುವುದರಿಂದ ಜನರಿಗಾಗುವ ಅನುಕೂಲತೆಗಳನ್ನು ವಿವರಿಸಿದರು. ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವುದರಿಂದ ಆಗುವ ಸಂತೃಪ್ತಿಯೇ ಬೇರೆ ಎಂದ ಅವರು, ಅಭಿವೃದ್ಧಿಯಲ್ಲಿ ರಾಜಕೀಯ ಮಾಡಬಾರದು. ರಾಜಕೀಯವನ್ನು ಚುನಾವಣೆಗೆ ಮಾತ್ರ ಸೀಮಿತಗೊಳಿಸಬೇಕು.ಅದನ್ನು ಕಾಶಿಪಟ್ಣ ಗ್ರಾಮಪಂಚಾಯಿತಿ ಮಾಡಿತೋರಿಸಿದೆ. ಅಧಿಕಾರ ವಿಕೇಂದ್ರಿಕರಣದ ಲಾಭವನ್ನು ಈ ಪಂಚಾಯಿತಿ ಪಡೆದುಕೊಂಡಿದೆ ಎಂದರು. 81 ಗ್ರಾಮಗಳನ್ನು ಹೊಂದಿರುವ ಬೆಳ್ತಂಗಡಿ ತಾಲೂಕಿಗೆ ರಸ್ತೆ ಜಾಸ್ತಿ ಇದ್ದು ಹೆಚ್ಷಿನ ಅನುದಾನ ಬರಬೇಕಾದುದು ನ್ಯಾಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಭಂಡಾರಿ ಅವರು ಮಾತನಾಡಿ, ರಸ್ತೆ ಕಾಮಗಾರಿ ಮತ್ತು ಪ್ರೌಢಶಾಲಾ ಕಟ್ಟಡ ನಿರ್ಮಾಣ ಮತ್ತು ಸ್ಥಳೀಯ ಯುವಪಡೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರಲ್ಲದೆ, ಪ್ರೌಢಶಾಲಾ ಶೌಚಾಲಯ ಕಾಮಗಾರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅನುದಾನದಿಂದ 50,000ರೂ. ಹಾಗೂ ಶಾಲಾ ಮೈದಾನಕ್ಕೆ ನೆರವು ನೀಡು ವುದಾಗಿ ಘೋಷಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಪಿ.ಧರಣೇಂದ್ರ ಕುಮಾರ್ ಮಾತನಾಡಿದರು.

ಸಮಾರಂಭದಲ್ಲಿ ಅಭಿವೃದ್ಧಿ ಕಾಮಗಾರಿಗೆ ನೆರವಾದ ಎಲ್ಲರನ್ನೂ ಸನ್ಮಾನಿಸಲಾಯಿತು. ಬೆಳ್ತಂಗಡಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ತನುಜಾ ಶೇಖರ್, ಹೊಸಂಗಡಿ ತಾಲೂಕು ಪಂಚಾಯಿತಿ ಸದಸ್ಯ ರಾದ ಚಂದು ಎಲ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಕೆ.ಪುಟ್ಟಸ್ವಾಮಿ, ಉಪಾಧ್ಯಕ್ಷ ಪ್ರವೀಣ್ ಪಿಂಟೋ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾಶಿಪಟ್ಣ ಗ್ರಾಮಪಂಚಾಯಿತಿ ಅಧ್ಯಕ್ಷ ಶ್ರೀ ಸತೀಶ್ ಅವರು ಸ್ವಾಗತ ಮತ್ತು ಪ್ರಾಸ್ತಾವಿಕ ಮಾತುಗಳನ್ನಾಡಿದರು.

0 comments:

Post a Comment