ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಬೆಂಗಳೂರು: 2010 ರ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಮೇ 6 ರಂದು ಮಧ್ಯಾಹ್ನ 2 ಗಂಟೆಗೆ ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಫಲಿತಾಂಶವನ್ನು ಮೇ 7 ರಂದು ಪ್ರಕಟಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಮೇ 6 ರಂದು ಮಧ್ಯಾಹ್ನ 2 ಗಂಟೆಗೆ ಎಲ್ಲ ಪ್ರೌಢಶಾಲೆಗಳಲ್ಲಿ ಪ್ರಕಟಿಸಲಾಗುವುದು. ಫಲಿತಾಂಶವು ಅಂದು ಬೆಳಿಗ್ಗೆಯಿಂದಲೇ ಮಂಡಳಿಯ ವೆಬ್ ಸೈಟ್ ನಲ್ಲಿ ಲಭ್ಯವಿರುತ್ತದೆ.
ದ್ವಿತೀಯ ಪಿ.ಯು.ಸಿ. ಪರೀಕ್ಷೆ ಫಲಿತಾಂಶವನ್ನು ಮೇ 7 ರಂದು ಪ್ರಕಟಿಸಲಾಗುತ್ತಿದ್ದು ಮಂಡಳಿಯ ವೆಬ್ ಸೈಟ್ ನಲ್ಲಿ ಮೇ 6 ರ ಸಂಜೆಯಿಂದಲೇ ಫಲಿತಾಂಶ ಲಭ್ಯವಿರುತ್ತದೆಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

0 comments:

Post a Comment