ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಬೆಂಗಳೂರು: ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡಲು ಮತ್ತು ಹೆಚ್ಚುತ್ತಿರುವ ಜನಸಂಖ್ಯೆಗೆ ಆಹಾರ ಭದ್ರತೆ ನೀಡಲು ಲಭ್ಯವಿರುವ ಸಾಗುವಳಿ ಜಮೀನಿನಲ್ಲಿ ಗರಿಷ್ಠ ಕೃಷಿ ಉತ್ಪಾದನೆಯನ್ನು ಪಡೆಯುವುದು ಅತ್ಯಾವಶ್ಯಕವಾಗಿದೆ. ಬೆಳೆ ವೈವಿದ್ಧೀಕರಣ, ವ್ಯವಸಾಯ ವೆಚ್ದದಲ್ಲಿ ಕಡಿತ, ಕೃಷಿಯೊಂದಿಗೆ ಪೂರಕ ಉಪಕಸುಬುಗಳಿಂದ ಪಶುಸಂಗೋಪನೆ, ರೇಷ್ಮೆ ಕೃಷಿ, ಮೀನುಗಾರಿಕೆ ಮುಂತಾದ ಚಟುವಟಿಕೆಗಳನ್ನು ನಮ್ಮ ರೈತರು ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ. ಕೃಷಿ ಇಲಾಖೆಯು ಪ್ರಸ್ತುತ ಪರಿಸ್ಥಿತಿಯನ್ನು ಮನಗಂಡು ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರೈತ ಬಾಂಧವರಿಗೆ ಅವಶ್ಯವಿರುವ ತಂತ್ರಜ್ಞಾನವನ್ನು ತಲುಪಿಸಲು, ಏಕಗವಾಕ್ಷಿ ವಿಸ್ತರಣಾ ಪದ್ದತಿಯಲ್ಲಿ ಸಮಗ್ರ ಕೃಷಿ ಮಾಹಿತಿಯನ್ನು ವಿವಿಧ ಅಭಿವೃದ್ಧಿ ಇಲಾಖೆಗಳ ಸಮನ್ವಯದೊಂದಿಗೆ ಸಮೂಹ ಜಾಗೃತಿ ಕಾರ್ಯಕ್ರಮದ ಕೃಷಿ ಉತ್ಸವದ ಮುಖಾಂತರ ತಲುಪಿಸುವ ಒಂದು ಪ್ರಯತ್ನ ನಡೆಸಿದೆ.ಕೃಷಿ ಚಟುವಟಿಕೆಗಳು ಹಂಗಾಮು ಆಧಾರಿತವಾಗಿರುವುದರಿಂದ ಈ ಕಾರ್ಯಕ್ರಮವನ್ನು ಮುಂಗಾರು ಪೂರ್ವ ಅವಧಿಯಲ್ಲಿ ಜೂನ್ 1 ರಿಂದ ಜೂನ್ 15 ರೊಳಗೆ ರಾಜ್ಯದಾದ್ಯಂತ ಅನುಷ್ಠಾನಗೊಳಿಸಲಾಗುತ್ತಿದೆ. ರೈತಬಾಂಧವರು ಇದರ ಪೂರ್ಣ ಪ್ರಯೋಜನ ಪಡೆಯಲು ಕೃಷಿ ಇಲಾಖೆ ವಿನಂತಿಸಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು.

0 comments:

Post a Comment