ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ಕ್ಲಬ್ ಜಂಟಿ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಗುರುವಾರ ಪತ್ರಿಕಾ ಭವನದಲ್ಲಿ ನಡೆಯಿತು. ಸಾರ್ವಜನಿಕರ ಉಪಯೋಗಕ್ಕೆ ರೂಪಿಸಲಾದ ಸಾರ್ವಜನಿಕ ವಾಚನಾಲಯವನ್ನು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಕೆ.ಎನ್.ವಿಜಯಪ್ರಕಾಶ್ ಉದ್ಘಾಟಿಸಿದರು.
ಪತ್ರಕರ್ತರ ಕುರಿತಾದ ಚಲನ ಚಿತ್ರ ಪ್ರದರ್ಶನ ನಡೆಯಿತು. ಖ್ಯಾತಚಲನ ಚಿತ್ರ ನಿರ್ದೇಶಕ ಸದಾನಂದ ಸುವರ್ಣರೊಂದಿಗೆ ಸಂವಾದ ನಡೆಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರ್ಷ ಅಧ್ಯಕ್ಷತೆ
ವಹಿಸಿದ್ದರು. ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಕೆ.ಆನಂದ ಶೆಟ್ಟಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗುರುವಪ್ಪ ಎನ್.ಟಿ.ಬಾಳೇಪುಣಿ, ಉಪಸ್ಥಿತರಿದ್ದರು,
ಮಂಗಳೂರು ಪ್ರೆಸ್ಕ್ಲಬ್ ಪ್ರಧಾನ ಕಾರ್ಯದರ್ಶಿ ಪಿ.ಬಿ.ಹರೀಶ್ ರೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

0 comments:

Post a Comment