ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಕುಂಬಳೆ: ``ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿನಲ್ಲಿ ಚೂಡಾಮಣಿಯಾಗು, ಜ್ಯೋತಿಯಾಗು ಜಗಕೆಲ್ಲ ಎಂಬ ಮಾತು ನಮಗೆಲ್ಲ ದಾರಿದೀಪವಾಗಬೇಕು. ಪುಟಾಣಿಗಳು ದೀಪಗಳಂತೆ, ಅದು ಶಾಲೆಯಲ್ಲಿ ಬೆಳಗುತ್ತದೆ. ಜೀವನ ಮೌಲ್ಯಗಳನ್ನು ಅಭಿವ್ಯಕ್ತಿಗೊಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿವೆ.'' ಎಂದು ಇಚ್ಲಂಪಾಡಿ ಹಿರಿಯ ಬುನಾದಿ ಶಾಲಾ ಮುಖ್ಯೋಪಾಧ್ಯಾಯ ಪಿ. ನರಹರಿ ಅಭಿಪ್ರಾಯಪಟ್ಟರು.ಅವರು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ತಿಂಗಳ `ಪ್ರತಿಭಾ ಭಾರತೀ' ಕಾರ್ಯಕ್ರಮವನ್ನು ಉದ್ಘಾಟಿಸಿದರು.ಆರನೇ ತರಗತಿ ವಿದ್ಯಾರ್ಥಿ ನವನೀತ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್.ಎಂ, ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕಿರಣ ಮಹೇಶ ಸ್ವಾಗತಿಸಿ, ಸುಹಾಸ್ ಜಿ.ಕಾಕತ್ಕರ್ ವಂದಿಸಿದರು. ಕೃಷ್ಣಕಿರಣ ಮತ್ತು ದೀಪಿಕಾ ಕಾರ್ಯಕ್ರಮ ನಿರೂಪಿಸಿದರು.

0 comments:

Post a Comment