ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಮೂಡಬಿದಿರೆ: ಕೌಶಲ್ಯಗಳ ಕೊರತೆ ಇಂದಿನ ಯುವಜನತೆಯಲ್ಲಿದೆ. ಪರಿಣಾಮಕಾರೀ ಸಂವಹನದ ಕೊರತೆಯಿಂದ ಯುವಜನತೆ ಇಂದು ಹಿಂದುಳಿಯುವಂತಾಗಿದೆ. ಶಿಕ್ಷಣದಲ್ಲಿ ಪಠ್ಯಗಳಿಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಪಠ್ಯೇತರ ಚಟುವಟಿಕೆ, ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿಕಾಣಲು ಸಾಧ್ಯ ಎಂದು ಉಡುಪಿ ಸರಕಾರಿ ಕಾಲೇಜಿನ ಸ್ನಾತಕೋತ್ತರ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಗಣಾನಾಥ ಎಕ್ಕಾರು ತಿಳಿಸಿದರು.
ಅವರು ಮಂಗಳವಾರ ವಿದ್ಯಾಗಿರಿಯ ಶಿವರಾಮ ಕಾರಂತ ವೇದಿಕೆಯಲ್ಲಿ ಆಳ್ವಾಸ್ ಪದವಿ ಕಾಲೇಜುಗಳ 22ವಿವಿಧ ವಿದ್ಯಾರ್ಥಿ ವೇದಿಕೆಗಳ ಉದ್ಘಾಟನೆ ನೆರವೇರಿಸಿದರು.ಜ್ಞಾನದೊಂದಿಗೆ ವಿದ್ಯಾರ್ಥಿಗಳು ಕೌಶಲ್ಯಗಳನ್ನು ರೂಪಿಸಬೇಕು. ಜ್ಞಾನ, ಕೌಶಲ್ಯ, ಆರೋಗ್ಯ ಹಾಗೂ ಜೀವನ ಮೌಲ್ಯಗಳನ್ನು ರೂಪಿಸಿಕೊಂಡಾಗ ಬದುಕು ಹಸನಾಗಲು ಸಾಧ್ಯ ಎಂದರು. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಡಾ.ಜಿ.ಎಚ್. ಪ್ರಭಾಕರ ಶೆಟ್ಟಿ, ಪ್ರಾಂಶುಪಾಲ ಪ್ರೊ.ಕುರಿಯನ್ ವೇದಿಕೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಓಣಂ ಪೂಕ್ಕಳಂ ರಚನಾ ಸ್ಪರ್ಧೆಯ ಬಹುಮಾನ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

0 comments:

Post a Comment