ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಮಂಗಳೂರು :ರಾಜ್ಯದಲ್ಲಿನ ವಿದ್ಯುತ್ ಸಮಸ್ಯೆ ನಿವಾರಣೆಗೆ ಅಗತ್ಯವಿರುವ ಕ್ರಮಗಳನ್ನು ಶೀಘ್ರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡುತ್ತಿದ್ದರು.ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಕಡಿಮೆ ಮಳೆ ಯಾಗಿರು ವುದರಿಂದ ಜಲಾಶಯ ಗಳಲ್ಲಿ ಕಳೆದ ವರ್ಷಕ್ಕಿಂತ ಶೇ. 30ರಷ್ಟು ನೀರು ಕಡಿಮೆ ಯಾಗಿದೆ. ಈಗಾಗಲೇ 700 ಮೆಗಾವ್ಯಾಟ್ ವಿದ್ಯುತ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಆಗಸ್ಟ್ 16 ರಂದು ಬೆಂಗಳೂರಿನಲ್ಲಿ ವಿಶೇಷ ಸಭೆ ಕರೆಯ ಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ:ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಕಡೆ ಪ್ರವಾ ಸೋದ್ಯಮ ಅಭಿವೃದ್ದಿಗೆ ವಿವಿಧ ಯೋಜನೆ ಹಮ್ಮಿ ಕೊಳ್ಳ ಲಾಗಿದೆ. ಮಂಗ ಳೂರಿನಲ್ಲಿ 250 ಕೋಟಿ ರೂ. ವೆಚ್ಚದ ಮೆರೈನ್ ಅಕ್ವಾ ಪಾರ್ಕ್, 100 ಕೋಟಿ ರೂ. ವೆಚ್ಚದಲ್ಲಿ ಬಂದರು ಅಭಿವೃದ್ಧಿ ಯೋಜನೆ, ನಂದಿಬೆಟ್ಟ, ಕೆಮ್ಮಣ್ಣು ಗುಂಡಿ ಅಭಿವೃದ್ಧಿ ಯೋಜನೆ, ಮಂಗಳ ಕಾರ್ನಿಶ್ ಯೋಜನೆ, ಜೋಗ್ ಜಲಪಾತ, ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ, ಮೂಡಬಿದ್ರೆ ಸಾವಿರ ಕಂಬದ ಬಸದಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸರಕಾರ ಯೋಜನೆ ಹಮ್ಮಿ ಕೊಂಡಿದೆ. ಈ ನಿಟ್ಟಿನಲ್ಲಿ ಖಾಸಗಿ ಸಹ ಭಾಗಿತ್ವ ದೊಂದಿಗೆ ಯೋಜನೆ ರೂಪಿಸ ಲಾಗುವುದು.
ಅಕ್ರಮ ಗಣಿಗಾರಿಕೆಗೆ ಕೇಂದ್ರದ ನೀತಿಗೆ ಸ್ವಾಗತ: ಅಕ್ರಮ ಗಣಿಗಾರಿಕೆಗೆ ಸಂಬಂಧಿ ಸಿದಂತೆ ಕೇಂದ್ರ ಸರಕಾರ ರಾಷ್ಟ್ರೀಯ ನೀತಿ ರೂಪಿಸುವ ಬಗ್ಗೆ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಹೇಳಿಕೆ ನೀಡಿರುವುದನ್ನು ತಾನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಗೆ ಅವಕಾಶ ಮಾಡಿಕೊಟ್ಟವರು ಕಾಂಗ್ರೆಸ್ಸಿಗರು. ಆದರೆ ಈಗ ದೂರು ಮಾತ್ರ ಯಡಿಯೂರಪ್ಪರ ಮೇಲೆ ಮಾಡುತ್ತಾರೆ. ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಗಣಿಗಾರಿಕೆಗೆ ಏಕೆ ಅವಕಾಶ ನೀಡಿಲ್ಲ. ಹಾಗೆ ಒಂದು ವೇಳೆ ಅವಕಾಶ ನೀಡಿದ್ದರೆ ಕಬ್ಬಿಣ, ಉಕ್ಕಿನ ಬೆಲೆ ಒಂದು ತಿಂಗಳಲ್ಲೇ ಇಳಿಯುತ್ತಿತ್ತು.ಕೇಂದ್ರ ಸರಕಾರ ಗಣಿಗಾರಿಕೆಯ ಬಗ್ಗೆ ರಾಷ್ಟ್ರೀಯ ನೀತಿ ರೂಪಿಸಿಲ್ಲ.ದೇಶದ ಎಲ್ಲಾ ಕಡೆ ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ಯಡಿಯೂರಪ್ಪ ತಿಳಿಸಿದರು.
ಶಿರಾಡಿ ಘಾಟ್ ರಸ್ತೆ ಕಾಂಕ್ರಿಟೀಕರಣಕ್ಕೆ ಕೇಂದ್ರ ಸರಕಾರವನ್ನು ಒತ್ತಾಯಿಸಲಾಗುವುದು. ಘಟ್ಟ ಪ್ರದೇಶದ ರಸ್ತೆ ಅಭಿವೃದ್ಧಿ 100 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು. ಮಡಿಕೇರಿ- ಬಂಟ್ವಾಳ ರಸ್ತೆ ಅಭಿವೃದ್ದಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದಿನ ವರ್ಷದೊಳಗೆ ಪೂರ್ಣಗೊಳ್ಳಲಿದೆ. ಜಿಲ್ಲಾ ನ್ಯಾಯಾಲಯದ ಕಟ್ಟಡ ಇನ್ನೆರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ದಕ್ಷಿಣ ಕನ್ನಡ ಜಿಲ್ಲಾ ರಂಗ ಮಂದಿರಕ್ಕೆ ಚಾಲನೆ ನೀಡಲಾಗುವುದು. ಮಂಗಳೂರಿಗೆ ಸಿಂಥೆಟಿಕ್ ಟ್ರಾಕ್ ರಚನೆಗೆ ವಾರದೊಳಗೆ ಎರಡು ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಡಿಬಿ ವತಿಯಿಂದ ಮತ್ತೆ 100 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಶಾಶ್ವತ ಕುಡಿಯುವ ನೀರಿನ ಯೋಜನೆಗಾಗಿ 40 ಕೋಟಿ ರೂ. ಕಾಮಗಾರಿಗೆ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಡಾ.ವಿ.ಎಸ್. ಆಚಾರ್ಯ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಸಂಸದ ಡಿ.ವಿ. ಸದಾನಂದ ಗೌಡ, ನಳಿನ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗರಾಜ ಶೆಟ್ಟಿ, ಶಾಸಕ ಯೋಗೀಶ್ ಭಟ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮೇಯರ್ ರಜನಿ ದುಗ್ಗಣ್ಣ, ಜಿಲ್ಲಾಧಿಕಾರಿ ಪೊನ್ನುರಾಜ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಶಂಕರ್ ಮೊದಲಾದವರು ಉಪಸ್ಥಿತರಿದ್ದರು.
ನಂತರ ಮುಖ್ಯ ಮಂತ್ರಿಗಳು ಕುಡುಪು ಅನಂತ ಪದ್ಮನಾಭ ದೇವ ಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು.ದೇವ ಸ್ಥಾನದ ಸಮಗ್ರ ಅಭಿವೃದ್ದಿಗೆ 2 ಕೋಟಿ ರೂಪಾಯಿಗಳ ನೆರವನ್ನು ಘೋಷಿಸಿದ ಮುಖ್ಯ ಮಂತ್ರಿಗಳು, ಪ್ರಸಕ್ತ ವರ್ಷದಲ್ಲಿ ರೂಪಾಯಿ ಒಂದು ಕೋಟಿಯನ್ನು ಬಿಡುಗಡೆ ಗೊಳಿಸುವುದಾಗಿ ಹೇಳಿದರು.
ದೇವರ ದರ್ಶನ ಮಾಡಿದ ಮುಖ್ಯಮಂತ್ರಿಗಳು ಮಾಧ್ಯಮದೊಂದಿಗೆ ಮಾತನಾಡಿ, ದೇಶ ಹಾಗೂ ರಾಜ್ಯದ ಸುಭಿಕ್ಷೆಗೆ ದೇವರಲ್ಲಿ ಪ್ರಾರ್ಥಿಸಿರುವುದಾಗಿ ಹೇಳಿದರು

0 comments:

Post a Comment