ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ಮೂಡಬಿದಿರೆ : ಸ್ಪರ್ಧಾತ್ಮಕ ಮನೋಭಾವ ಆಟಗಾರರಿಗೆ ಅಗತ್ಯ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ಮೈಗೂಢಿಸಬೇಕಾಗಿದೆ. ಶಾಲೆಗಳು ಅದರಲ್ಲೂ ಗ್ರಾಮೀಣ ಪ್ರದೇಶದ ಶಾಲೆಗಳು ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ರೂಪಿಸುತ್ತಿರುವುದು ಶ್ಲಾಘನಾರ್ಹ ಎಂದು ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.ಕಡಂದಲೆ ಶ್ರೀ ಸುಬ್ರಹ್ಮಣ್ಯಸ್ವಾಮಿ ಪ್ರೌಢಶಾಲೆಯ ಜಯರಾಮ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಮೂಡಬಿದಿರೆ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿಭಾಗದ ಕ್ರೀಡಾಕೂಟ 2010 ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಮಾತನಾಡಿ ಊರವರ ಸಹಕಾರ ಶಿಕ್ಷಣ ಸಂಸ್ಥೆಗಳಿಗೆ ದೊರೆತಲ್ಲಿ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದರು.
ಪಾಲಡ್ಕ ಗ್ರಾಮಪಂಚಾಯತ್ ಅಧ್ಯಕ್ಷ ಸುನೀತಾ ಎಸ್ ಶೆಟ್ಟಿ ಧ್ವಜಾರೋಹಣಗೈದರು. ದ.ಕ.ಜಿ.ಪಂ. ನಿಕಟಪೂರ್ವಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಗೌರವ ವಂದನೆ ಸ್ವೀಕರಿಸಿದರು. ಮುಖ್ಯಅತಿಥಿಗಳಾಗಿ ಮುಂಡ್ಕೂರು ವಿದ್ಯಾವರ್ಧಕ ಪ.ಪೂ.ಕಾಲೇಜು ಪ್ರಾಂಶುಪಾಲ ಎಚ್.ಉದಯಕುಮಾರ್ ಹಬ್ಬು, ಮುಂಡ್ಕೂರು ಲಯನ್ಸ್ ಅಧ್ಯಕ್ಷ ಸತ್ಯಶಂಕರ ಶೆಟ್ಟಿ, , ವಿಜೇಂದ್ರ ಪೈ ಅತಿಥಿಗಳಾಗಿದ್ದರು.
ಶಾಲಾ ಸಂಚಾಲಕ ಕೆ.ಸುದರ್ಶನ ಶೆಟ್ಟಿ ಸ್ವಾಗತಿಸಿದರು. ಮುಖ್ಯಶಿಕ್ಷಕ ಎಸ್.ಎನ್.ರಾವ್ ಪಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

0 comments:

Post a Comment