ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಸೆಪ್ಟೆಂಬರ್ : 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಡಿಸೆಂಬರ್ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ನಡೆಸಲಾಗುತ್ತದೆ. ಬಸವನಗುಡಿ ನ್ಯಾಷನಲ್ ಕಾಲೆಜು ಮೈದಾನದಲ್ಲಿ 3 ದಿನಗಳ ಕಾಲ ನಡೆಸಲಾಗುವ ಈ ಸಮ್ಮೇಳನದಲ್ಲಿ ಸುಮಾರು 5 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆಯೆಂದು ಗೃಹ ಮತ್ತು ಸಾರಿಗೆ ಸಚಿವ ಆರ್.ಅಶೋಕ್ ತಿಳಿಸಿದರು.
ಸರಕಾರದ ವತಿಯಿಂದ ಪ್ರತಿ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಚರಣೆಗಾಗಿ ರೂ.1 ಕೋಟಿಯ ಅನುದಾನವವನ್ನು ನೀಡಲಾಗುತ್ತಿತ್ತು. ಈ ಬಾರಿ ಈ ಆಚರಣೆಗೆ ರೂ. 1.5 ಕೋಟಿ ಅನುದಾನ ಕೋರಲಾಗಿದೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ರೂ. 1 ಕೋಟಿ ನೆರವು ನೀಡಲಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯ ಸರಕಾರಿ ನೌಕರರು ತಮ್ಮ ಒಂದು ದಿನದ ಸಂಬಳವನ್ನು ಇದಕ್ಕಾಗಿ ನೀಡಲಿರುವುದಾಗಿ ಸರಕಾರಿ ನೌಕರರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆಂದು ತಿಳಿಸಿದ ಸಚಿವರು, ಬೆಂಗಳೂರು ನಗರದ ವಿಧಾನಪರಿಷತ್ ಸದಸ್ಯರು, ವಿಧಾನಸಭಾ ಸದಸ್ಯರು ಮತ್ತು ಸಚಿವರುಗಳು ತಮ್ಮ ಒಂದು ತಿಂಗಳ ಸಂಬಳವನ್ನು ನೀಡಲಿದ್ದಾರೆಂದರು.ಸಮ್ಮೇಳನಾ ನಂತರ ಇದರ ನೆನಪಿನಲ್ಲಿ ಕನ್ನಡ ಸ್ಮಾರಕ ಭವನ ನಿರ್ಮಾಣ ಮಾಡಲಾಗುವುದೆಂದು ತಿಳಿಸಿದ ಸಚಿವರು ಅದಕ್ಕೆ ಅಗತ್ಯವಾದ ಜಾಗ ನಕ್ಷೆ ಮತ್ತಿತರ ವಿಚಾರಗಳನ್ನು ಕುರಿತಂತೆ ಅನಂತರ ತೀರ್ಮಾನಿಸಲಾಗುವುದು ಎಂದರು.

ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಲು ಬೇಕಾದ ಎಲ್ಲ ಸಹಕಾರವನ್ನು ಸರಕಾರವು ನೀಡಲಿದೆಯೆಂದು ತಿಳಿಸಿದ ಸಚಿವರು ಕನ್ನಡ ಭಾಷೆ, ನೆಲ, ನಾಡು ನುಡಿ ಸಂರಕ್ಷಣೆ ಕುರಿತಂತೆ ಸಮ್ಮೇಳನದಲ್ಲಿ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆಯಲ್ಲದೆ, ಕನ್ನಡವನ್ನು ಸಾಮಾನ್ಯ ಜನರ ಮನೆ ಬಾಗಿಲಿಗೆ ಒಯ್ಯುವ ಪ್ರಯತ್ನ ಮಾಡಲಾಗುತ್ತದೆ.

ನಾಡಹಬ್ಬವಾಗಿ ಆಚರಣೆ:

ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಾಡಹಬ್ಬವಾಗಿ ಆಚರಿಸಲಾಗುತ್ತದೆ. ಸಮ್ಮೇಳನವನ್ನು ವ್ಯವಸ್ಥಿತ ರೀತಿಯಲ್ಲಿ ನಡೆಸುವ ಸಲುವಾಗಿ ಹಲವಾರು ಸಮಿತಿಗಳನ್ನು ರಚಿಸಲಾಗಿದೆ ಯೆಂದು ತಿಳಿಸಿದ ಸಚಿವರು ತಾವು ಸಮ್ಮೇಳನ ಸಮಿತಿಯ ಮಹಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದಾಗಿಯೂ ಸಮ್ಮೇಳನದಲ್ಲಿ ಪಾಲ್ಗೊಳ್ಳುವವರ ಊಟ, ವಸತಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದೆಂದರು.
40 ವರ್ಷಗಳ ನಂತರ ಬೆಂಗಳೂರು ನಗರದಲ್ಲಿ ಈ ಸಮ್ಮೇಳನ ನಡೆಸುವ ಅವಕಾಶ ದೊರೆತಿದೆ. ಅಕ್ಟೋಬರ್ 1 ರಂದು ಈ ಸಂಬಂಧ 8 ಸಂಪುಟಗಳನ್ನೊಳಗೊಂಡ 10 ಸಾವಿರ ಪುಟಗಳ ಕನ್ನಡದ ನಿಘಂಟನ್ನು ಮುಖ್ಯ ಮಂತ್ರಿಗಳು ಬಿಡುಗಡೆ ಮಾಡಲಿದ್ದಾರೆಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಲ್ಲೂರು ಪ್ರಕಾಶ್ ತಿಳಿಸಿದರು. ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಸರಕಾರ ವ್ಯವಸ್ಥೆಗೊಳಿಸುತ್ತಿರುವುದು ಸಮಾಧಾನ ತಂದಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಚಿವ ಮುಮ್ತಾಜ್ ಅಲಿಖಾನ್, ಪೂಜ್ಯ ಮಹಾಪೌರರಾದ ನಟರಾಜ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯರ್ಮತ್ರಿ ಚಂದ್ರು, ಶಾಸಕರುಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಕಾರ್ಯದರ್ಶಿ ಜಯರಾಮರಾಜೇ ಅರಸ್ ಉಪಸ್ಥಿತರಿದ್ದರು.

0 comments:

Post a Comment