ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ -ರಾಷ್ಟ್ರ
ಬೆಂಗಳೂರು: ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಉಚ್ಛನ್ಯಾಯಾಲಯ ಸೆಪ್ಟೆಂಬರ್ 24 ರಂದು ತೀರ್ಪು ಪ್ರಕಟಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ಸೆಪ್ಟೆಂಬರ್ 24 ಮತ್ತು 25 ರಂದು ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಲ್ಲಿ ಇಂದು ಪ್ರಕಟಿಸಿದ್ದಾರೆ.ನಿಷೇಧ : ಮುಖ್ಯಮಂತ್ರಿ ಸೂಚನೆ
ಸೆಪ್ಟೆಂಬರ್ 24 ಮತ್ತು 25 ರಂದು ಸಂತೆ-ಜಾತ್ರೆ, ಮೆರವಣಿಗೆಗಳು, ಸಭೆ-ಸಮಾರಂಭಗಳನ್ನು ನಿಷೇಧಿಸಿ ಆದೇಶ ಹೊರಡಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಆದೇಶ ಮದುವೆ ಹಾಗೂ ಶವ ಸಂಸ್ಕಾರಗಳಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನ್ವಯಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಲ್ಲಿ ಇಂದು ಪ್ರಕಟಿಸಿದರು.
ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಉಚ್ಛನ್ಯಾಯಾಲಯ ಸೆಪ್ಟೆಂಬರ್ 24 ರಂದು ತೀರ್ಪು ಪ್ರಕಟಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಸಂಬಂಧ ಕರೆಯಲಾಗಿದ್ದ ಸರ್ವಪಕ್ಷಗಳ ಮುಖಂಡರ ಸಭೆಯ ನಂತರ ಅವರು ಮಾಧ್ಯಮದವರೊಡನೆ ಮಾತನಾಡುತ್ತಿದ್ದರು.

ಕಠಿಣ ಕ್ರಮ !
ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋಧಿಸುವವರ ಹಾಗೂ ಶಾಂತಿಗೆ ಭಂಗ ಉಂಟು ಮಾಡುವವರ ವಿರುದ್ಧ ಅತ್ಯಂತ ಕಠಿಣ ಹಾಗೂ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ ಅವರು ಈ ಅವಧಿಯಲ್ಲಿ ಇ-ಮೇಲ್ ಹಾಗೂ ಎಸ್ ಎಂ ಎಸ್ ಗಳನ್ನೂ ಕಳುಹಿಸುವುದನ್ನು ಮಿತಿಗೊಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸಾರ್ವಜನಿಕರು ಈ ಅವಧಿಯಲ್ಲಿ ಇ-ಮೇಲ್ ಹಾಗೂ ಎಸ್ ಎಂ ಎಸ್ ಗಳನ್ನು ಕಳುಹಿಸದಿದ್ದಲ್ಲಿ ಅಥವಾ ಕಳುಹಿಸುವುದನ್ನು ಮಿತಿಗೊಳಿಸಿದಲ್ಲಿ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಕೂಡಲೇ ಪತ್ತೆ ಹಚ್ಚಲು ಪೊಲೀಸರಿಗೆ ನೆರವಾಗುತ್ತದೆ ಎಂದರು.

ವದಂತಿಗಳಿಗೆ ಕಿವಿಗೊಡದಿರಿ !

ಯಾವುದೇ ಪ್ರಚೋದನಾತ್ಮಕ ಹೇಳಿಕೆಗಳಿಗೆ ಹಾಗೂ ವದಂತಿಗಳಿಗೆ ಕಿವಿಗೊಡಬೇಡಿ ಎಂದು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ ಯಡಿಯೂರಪ್ಪ ಅವರು ಕರ್ನಾಟಕ ರಾಜ್ಯವನ್ನು ಹಿಂದೂ, ಮುಸಲ್ಮಾನ ಹಾಗೂ ಕ್ರೈಸ್ತ ಧರ್ಮದವರ ಶಾಂತಿ ತವರೂರನ್ನಾಗಿಸಲು ರಾಜ್ಯ ಸರಕಾರದೊಂದಿಗೆ ಸಹಕರಿಸಲು ವಿನಂತಿಸಿದರು. ರಾಜ್ಯ ವಿಧಾನ ಪರಿಷತಿನ ಪ್ರತಿಪಕ್ಷ ನಾಯಕಿ ಮೋಟಮ್ಮ, ರಾಜ್ಯ ವಿಧಾನ ಸಭೆಯ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಭಾರತೀಯ ರಾಷ್ಟ್ರೀಯ ಕಾಂಗ್ರಸ್ ಪಕ್ಷದ ರಾಜ್ಯಾಧ್ಯಕ್ಷ ಆರ್, ವಿ, ದೇಶಪಾಂಡೆ, ಜಾತ್ಯಾತೀತ ಜನತಾ ದಳದ ಮುಖಂಡ ಎಂ. ಸಿ. ನಾಣಯ್ಯ, ಭಾರತೀಯ ಕಮ್ಯನಿಸ್ಟ್ ಮಾರ್ಕ್ ಸ್ಟ್ ಪಕ್ಷದ ಜಿ. ಎನ್, ನಾಗರಾಜ್, ಬಹುಜನ ಸಮಾಜ ಪಕ್ಷದ ಶ್ರೀ ಮಾರಸಂದ್ರ ಮುನಿಯಪ್ಪ ಅವರೂ ಸೇರಿದಂತೆ ಹಲವು ಗಣ್ಯರು ಸರ್ವಪಕ್ಷ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದರು.

0 comments:

Post a Comment