ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಆಟ - ಅವಲೋಕನ
ಮೂಡಬಿದಿರೆ: ನಿಟ್ಟೆ ಶಿಕ್ಷಣ ಸಂಸ್ಥೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಕರ್ನಾಟಕ ಅಥ್ಲೆಟಿಕ್ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಜ್ಯೂನಿಯರ್ ಅಥ್ಲೆಟಿಕ್ ಕ್ರೀಡಾಕೂಟ "ಏಕಲವ್ಯ ಕ್ರೀಡೋತ್ಸವ - 2010" ಅಕ್ಟೋಬರ್ 23ರಿಂದ 26ರ ತನಕ ಮೂಡಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಕ್ರೀಡಾಕೂಟ ನಾಲ್ಕು ವಿಭಾಗಗಳಲ್ಲಿ ನಡೆಯಲಿವೆ. 14ವರ್ಷ ವಯೋಮಿತಿ, 16ವರ್ಷ, 18ವರ್ಷ ಮತ್ತು 20ವರ್ಷ ವಯೋಮಿತಿಯಲ್ಲಿ ಈ ಸ್ಪರ್ಧೆಗಳು ನಡೆಯಲಿವೆ. ಭಾಗವಹಿಸುವ ಕ್ರೀಡಾಳುಗಳು ತಮ್ಮ ಜನನ ಪ್ರಮಾಣ ಪತ್ರವನ್ನು ಹಾಜರು ಪಡಿಸುವಂತೆ ಸಂಘಟಕರು ವಿನಂತಿಸಿದ್ದಾರೆ. ಅಕ್ಟೋಬರ್ 23ರಂದು ಸಂಜೆ 5ಕ್ಕೆ ಸ್ವರಾಜ್ಯ ಮೈದಾನದಲ್ಲಿ ಮಂಗಳೂರು ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ವಹಿಸುವರು. ಮೂಡಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ ವಂದನೆ ಸ್ವೀಕರಿಸಲಿದ್ದಾರೆ. ಪುರಸಭಾಧ್ಯಕ್ಷ ರತ್ನಾಕರ ದೇವಾಡಿಗ ಧ್ವಜಾರೋಹಣ ಗೈಯಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ನಿಟ್ಟೆ ವಿದ್ಯಾಸಂಸ್ಥೆಯ ರಾಜೇಂದ್ರ ಮತ್ತು ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ವೈ ಕುಲಕರ್ಣಿ ಪಾಲ್ಗೊಳ್ಳಲಿದ್ದಾರೆ.
26ರಂದು ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್.ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸುವರು. ಶಾಸಕ ಕೆ.ಅಭಯಚಂದ್ರ ಜೈನ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಕ್ಯಾ ಗಣೇಶ್ ಕಾರ್ಣಿಕ್, ರತ್ನಾಕರ ದೇವಾಡಿಗ ಪಾಲ್ಗೊಳ್ಳಲಿದ್ದಾರೆ.

0 comments:

Post a Comment