ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
8:06 PM

ಕಾರ್ಯಾಗಾರ

Posted by ekanasu

ಪ್ರಾದೇಶಿಕ ಸುದ್ದಿ
ಮಂಗಳೂರು:ಭಾರತ ಸರಕಾರದ ಕಾಯರ್ಬೋರ್ಡ್ ಹಾಗೂ ದ.ಕ. ಜಿಲ್ಲಾಸಣ್ಣ ಕೈಗಾರಿಕಾ ಸಂಘ ಯಯ್ಯಾಡಿ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 6-10-10 ರಂದು ಬೆಳಗ್ಗೆ 10.30ಕ್ಕೆ ದ.ಕ.ಜಿಲ್ಲಾ ಕೈಗಾರಿಕಾ ಸಂಘ ಯಯ್ಯಾಡಿಯಲ್ಲಿ ತೆಂಗಿನ ನಾರಿನ ಉತ್ಪನ್ನಗಳ ಬಗ್ಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಈ ಕಾರ್ಯಾಗಾರದಲ್ಲಿ ಕಾಯರ್ಕಾಯರ್ಬೋರ್ಡ್ ನಲ್ಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಹಾಗೂ ಕಾಯರ್ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಲಾಗುವುದು. ಆಸಕ್ತ ಭಾವೀ ಉದ್ಯಮಶೀಲರು,ತೆಂಗಿನ ನಾರಿನ ಉತ್ಪನ್ನ ತಯಾರಿಸುವ ಸಹಕಾರ ಸಂಘಗಳು,ಸ್ವಸಹಾಯ ಗುಂಪುಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ..

0 comments:

Post a Comment