ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಬೆಂಗಳೂರು :ಅಭಿವೃದ್ಧಿ ಹಾಗೂ ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ವೇಗ ಹೆಚ್ಚಿಸುವ ದೃಷ್ಟಿಯಿಂದ ಆಡಳಿತ ಯಂತ್ರವನ್ನು ಮತ್ತಷ್ಟು ಕ್ರಿಯಾಶೀಲ ಹಾಗೂ ಚುರುಕು ಗೊಳಿಸುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸರಕಾರದ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಐದು ತಿಂಗಳಲ್ಲಿ ಯೋಜನಾ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಳೆದ ವರ್ಷಕ್ಕಿಂತ ಶೇ. 29 ರಷ್ಟು ಹೆಚ್ಚು ಆರ್ಥಿಕ ಸಾಧನೆಯಾಗಿದೆ. ಕಳೆದ ವರ್ಷ ಅಂದರೆ 2009-10 ನೇ ಸಾಲಿನ ಏಪ್ರಿಲ್ನಿಂದ ಆಗಸ್ಟ್ನವರೆಗೆ 7108 ಕೋಟಿ ರೂ. ಯೋಜನಾ ವೆಚ್ಚ ಆಗಿತ್ತು. ಈ ವರ್ಷ ಅಂದರೆ 2010-11 ನೇ ಸಾಲಿನಲ್ಲಿ ಇದೇ ಅವಧಿಯಲ್ಲಿ 9203 ಕೋಟಿ ರೂ. ಹೆಚ್ಚು ವೆಚ್ಚವಾಗಿದೆ. ಅಂದರೆ 2,095 ಕೋಟಿ ರೂ. ಹೆಚ್ಚು ವೆಚ್ಚವಾಗಿದೆ ಎಂದು ವಿವರ ನೀಡಿದರು.
ಕಳೆದ ವರ್ಷ 5123 ಕೋಟಿ ರೂ. ಹಣ ಯೋಜನಾ ಕಾರ್ಯಕ್ರಮಗಳಿಗೆ ಬಿಡುಗಡೆಯಾಗಿದ್ದರೆ ಈ ವರ್ಷ 12,812 ಕೋಟಿ ರೂ. ಬಿಡುಗಡೆಯಾಗಿದೆ. ಅಂದರೆ 7,689 ಕೋಟಿ ರೂ. ಹೆಚ್ಚು ಬಿಡುಗಡೆ ಮಾಡಲಾಗಿದೆ.

ಈ ವರ್ಷದ ಬಜೆಟ್ನಲ್ಲಿ 58 ಹೊಸ ಯೋಜನೆ ಪ್ರಕಟಿಸಲಾಗಿದ್ದು, 33 ಯೋಜನೆಗಳ ಅನುಷ್ಟಾನಕ್ಕೆ ಸರಕಾರಿ ಆದೇಶ ಹೊರಡಿಸಲಾಗಿದೆ. ಉಳಿದ 25 ಯೋಜನೆಗಳಿಗೆ ನವೆಂಬರ್ 15 ರೊಳಗೆ ಸಂಪೂರ್ಣ ಸರಕಾರಿ ಆದೇಶ ಹೊರಡಿಸಿ ಅನುಷ್ಠಾನ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.

ಭಾಗ್ಯಲಕ್ಷ್ಮಿ ಯೋಜನೆಯಡಿ ಎಲ್ಲಾ 10 ಲಕ್ಷ ಫಲಾನುಭವಿಗಳಿಗೆ ಆರೋಗ್ಯ ತಪಾಸಣೆ, ಸೀರೆ ಮತ್ತು ಫಲಾನುಭವಿ ಮಕ್ಕಳಿಗೆ ಹಾಲು ವಿತರಿಸುವ ಕಾರ್ಯಕ್ರಮ ಪೂರ್ವನಿಗದಿತ ಕಾರ್ಯಸೂಚಿಯಂತೆ ನಡೆಯಲಿದೆ. ಇದಕ್ಕೆ ಪೂರ್ವಭಾವಿ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಇಲಾಖಾ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ.

ಈ ತಿಂಗಳ 27 ರಿಂದ ಜಿಲ್ಲಾ ಪ್ರವಾ ಕೈಗೊಂಡು ಜಿಲ್ಲಾ ಮಟ್ಟದ ಅಭಿವೃದ್ಧಿ ಪರಿಶೀಲನಾ ಸಭೆಗಳನ್ನು ನಡೆಸಲಿದ್ದೇನೆ.

ಈ ವರ್ಷದ ಡಿಸೆಂಬರ್ ಅಂತ್ಯಕ್ಕೆ ಎಲ್ಲಾ ಇಲಾಖೆಗಳು ಶೇ. 75 ರಷ್ಟು ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸುವಂತೆ ಅಗತ್ಯ ಕಾರ್ಯಕ್ರಮ ಹಾಕಿಕೊಳ್ಳಲು ಇಲಾಖಾ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿರುವುದಾಗಿ ಹೇಳಿದರು.

0 comments:

Post a Comment