ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
4:00 PM

ಮದ್ಯದಂಗಡಿ ಬಂದ್

Posted by ekanasu

ಪ್ರಾದೇಶಿಕ ಸುದ್ದಿ
ಮಂಗಳೂರು: ಶ್ರೀ ಹನುಮಾನ್ ಶಕ್ತಿ ಯಜ್ಞ ಮತ್ತು ವಿರಾಟ್ ಹಿಂದೂ ಸಮಾಜೋತ್ಸವ ಡಿ.12 ರಿಂದ 13ರವರೆಗೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಸುಳ್ಯದಲ್ಲಿ ನಡೆಯಲಿದ್ದು, ಈ ಸಂದರ್ಭಗಳಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಗಮನದಲ್ಲಿರಿಸಿ ಈ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಮದ್ಯದಗಂಗಡಿ ಮುಚ್ಚಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಜಿಲ್ಲಾಧಿಕಾರಿಗಳಾದ ಸುಬೋಧ್ ಯಾದವ್ ಅವರು ಆದೇಶಿಸಿ ಅಧಿಸೂಚನೆ ಹೊರಡಿಸಿದ್ದಾರೆ.ಡಿಸೆಂಬರ್ 12ರಂದು ಬೆ.6ರಿಂದ 12ಗಂಟೆವರೆಗೆ ಬಂಟ್ವಾಳ ಪಟ್ಟಣ ವ್ಯಾಪ್ತಿಯಲ್ಲಿ, ಬೆಳ್ತಂಗಡಿ ಪಟ್ಟಣ ವ್ಯಾಪ್ತಿಯಲ್ಲಿ, ಡಿ.13ರಂದು ಬೆ. 6ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಪುತ್ತೂರು ಪಟ್ಟಣ ವ್ಯಾಪ್ತಿಯಲ್ಲಿ, ಸುಳ್ಯ ಪಟ್ಟಣ ವ್ಯಾಪ್ತಿಯಲ್ಲಿ ಮದ್ಯದಂಗಡಿ ಮುಚ್ಚಲು ಆದೇಶಿಸಲಾಗಿದೆ. ಈ ದಿನಗಳಂದು ಹೊಟೆಲುಗಳಲ್ಲಾಗಲೀ, ನಾನ್ ಪ್ರೊಪ್ರೈಟರ್ ಗಳಲ್ಲಿ, ಸ್ಟಾರ್ ಹೊಟೆಲ್ ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ದ.ಕ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಿದೆ ಹಾಗೂ ನಿಷೇದಾಜ್ಞೆ ಇರುವ ಸಮಯದಲ್ಲಿ ಆ ವ್ಯಾಪ್ತಿಗೊಳಪಟ್ಟ ವೈನ್ ಶಾಪ್, ಬಾರ್ ಗಳ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರುಗಳನ್ನು ಕಡ್ಡಾಯವಾಗಿ ಮಾಡುವಂತೆ ವ್ಯವಸ್ಥೆ ಗೊಳಿಸಲು ತಿಳಿಸಿದೆ

0 comments:

Post a Comment