ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದಢಶಿಕ ಸುದ್ದಿ
ಮೂಡಬಿದಿರೆ: ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ ಗುರೂಜಿ ಫೆ.16ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಂದು ಸಂಜೆ 6ರಿಂದ 8.30ರ ತನಕ ಮಂಗಳ ಸಂಧ್ಯಾ ಎಂಬ ವಿಶೇಷ ಕಾರ್ಯಕ್ರಮವನ್ನು ಅವರು ನಡೆಸಿಕೊಡಲಿದ್ದಾರೆ. ಸತ್ಸಂಗ, ಧ್ಯಾನ ಹಾಗೂ ಜ್ಞಾನವನ್ನೊಳಗೊಂಡ ಮಂಗಳ ಸಂಧ್ಯಾ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಮಿಕ್ಕಿದ ರವಿಶಂಕರ ಗುರೂಜಿ ಭಕ್ತವೃಂದ ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳ ಸಂಧ್ಯಾ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಶ್ರೀ ರವಿಶಂಕರ ಗುರೂಜಿ ಹತ್ತು ವರುಷಗಳ ಹಿಂದೆ ಅಂದರೆ 2000ದ ಸಂದರ್ಭದಲ್ಲಿ ಮಂಗಳೂರಿಗೆ ಆಗಮಿಸಿ ಸತ್ಸಂಗ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಆ ಸಂದರ್ಭದಲ್ಲಿ ಸುಮಾರು 30ಸಾವಿರದಷ್ಟು ಭಕ್ತವೃಂಧ ಭಾಗವಹಿಸಿದ್ದರು.
ನೆರೆಯ ಕಾಸರಗೋಡು ಜಿಲ್ಲೆಯಿಂದ ಶ್ರೀ ರವಿಶಂಕರ ಗುರೂಜಿ ಮಂಗಳೂರಿಗೆ ಆಗಮಿಸಲಿದ್ದಾರೆ. ಮಂಗಳೂರಿನಲ್ಲಿ ಮಂಗಳಸಂಧ್ಯಾ ಕಾರ್ಯಕ್ರಮ ನಡೆಸಿ ಬಳಿವ ಜಿಲ್ಲೆಯ ವಿವಿದೆಡೆಗಳಲ್ಲಿ ಖಾಸಗೀ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮಂಗಳೂರು ವಿಭಾಗವು ಒಟ್ಟು ಆರು ಜಿಲ್ಲೆಗಳನ್ನೊಳಗೊಂಡಿದೆ. ದ.ಕ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳನ್ನೊಳಗೊಂಡಿದ್ದು ಈಗಾಗಲೇ 30ಸಾವಿರಕ್ಕೂ ಅಧಿಕ ಮಂದಿ ಸುದರ್ಶನ ಕ್ರಿಯೆ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಇವರೆಲ್ಲರೂ ಮಂಗಳ ಸಂಧ್ಯಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಳೆದ 30 ವರುಷಗಳ ಹಿಂದೆ ಸ್ಥಾಪನೆಗೊಂಡ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಇದೀಗ 150 ದೇಶಗಳಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿದೆ. ಇತ್ತೀಚೆಗಷ್ಟೇ ಚೈನಾ ದೇಶದಲ್ಲೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಾಖೆ ಪ್ರಾರಂಭಗೊಂಡಿತ್ತು.
ಸುಸಜ್ಜಿತ ವ್ಯವಸ್ಥೆ : ಶ್ರೀ ರವಿಶಂಕರ ಗುರೂಜಿ ಮಂಗಳೂರು ಭೇಟಿ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಸಂಪೂರ್ಣ ಸುಸಜ್ಜಿತ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ಈ ಕಾರ್ಯಕ್ರಮದಲ್ಲಿ ಗುರೂಜಿ ಅವರ ಮಂಗಳ ಸಂಧ್ಯಾ ಕಾರ್ಯಕ್ರಮ ವೀಕ್ಷಣೆಗೆ ಅನುಕೂಲವಾಗುವಂತೆ ಅಲ್ಲಲ್ಲಿ ಸಿ.ಸಿ.ಟಿ.ವಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ.

0 comments:

Post a Comment