ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ವೇಣೂರು: ರಕ್ತದಾನವೆಂಬುದು ಶ್ರೇಷ್ಠವಾದ ದಾನಗಳಲ್ಲೊಂದಾಗಿದೆ.ಅದು ಅಮೂಲ್ಯ ದಾನವೆಂದೇ ಪರಿಗಣಿಸಲ್ಪಟ್ಟಿದೆ. ರಕ್ತದಾನದಿಂದ ಜೀವವೊಂದರ ಉಳಿವು ಸಾಧ್ಯ. ಜೀವಿತಾವಧಿಯಲ್ಲಿ ರಕ್ತದಾನ ಮಾಡುವ ಮೂಲಕ ಪುಣ್ಯಸಂಪಾದನೆ ಸಾಧ್ಯ ಎಂದು ಗುರುವಾಯನಕೆರೆ ಅಭಯಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶ್ರೀಹರಿ ಅಭಿಪ್ರಾಯಿಸಿದರು.ಗೋಕರ್ಣಮಂಡಲಾಧೀಶ್ವರ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಆಶಯದಂತೆ ರೋಟರಿ , ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಯೋಗದೊಂದಿಗೆ ಉಪ್ಪಿನಂಗಡಿ ಹವ್ಯಕ ಮಂಡಲ, ವೇಣೂರು ವಲಯದ ಆಶ್ರಯದಲ್ಲಿ ವೇಣೂರು ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ ರಕ್ತದಾನ ಮತ್ತು ರಕ್ತ ವರ್ಗೀಕರಣ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಕೆ, ಕಾಂತಾಜೆ ಈಶ್ವರ ಭಟ್, ವಿದ್ಯೋದಯ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಶಿವರಾಮ ಹೆಗ್ಡೆ, ಶ್ರೀಕ್ಷೇತ್ರ ಧ.ಗ್ರಾ.ಯೋಜನೆ ನಿರ್ದೇಶಕ ಜಯಶಂಕರ ಶರ್ಮ ಅತಿಥಿಗಳಾಗಿದ್ದರು. ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಪಿ.ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ವೇಣೂರು ಹವ್ಯಕ ವಲಯಾಧ್ಯಕ್ಷ ದಡ್ಡು ಬಾಲಕೃಷ್ಣ ಭಟ್ ಸ್ವಾಗತಿಸಿದರು. ಉಪ್ಪಿನಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಬಾಲ್ಯಶಂಕರ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇಣೂರು ವಲಯ ಪ್ರಸಾರ ಶಾಖೆಯ ಹರೀಶ್ ಕೆ.ಆದೂರು ಕಾರ್ಯಕ್ರಮ ನಿರೂಪಿಸಿದರು. ಶಂಕರನಾರಾಯಣ ಭಟ್ ಕೊಂಕಣಾಜೆ ಗುರುವಂದನೆ ಸಲ್ಲಿಸಿದರು. ಹಚ್ಚಾಡಿ ಸುಬ್ರಹ್ಮಣ್ಯ ಭಟ್ ವಂದಿಸಿದರು.

0 comments:

Post a Comment