ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ಮಂಗಳೂರು ವಿ.ವಿ. ಅಭ್ಯದಯಕ್ಕೆ ಆಳ್ವಾಸ್ ಕೊಡುಗೆ ಅಪಾರ: ಪ್ರಭಾಕರ ನೀರುಮಾರ್ಗ
ಮೂಡಬಿದಿರೆ : ಮಂಗಳೂರು ವಿಶ್ವವಿದ್ಯಾನಿಲಯದ ಅಭ್ಯುದಯ ಏಳಿಗೆಗೆ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಕೊಡುಗೆ ಅಪಾರವಾಗಿದೆ. ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಮಂಗಳೂರು ವಿ.ವಿ. ಸಾಧನೆ ಮೆರೆಯಲು ಆಳ್ವಾಸ್ ಕಾಲೇಜಿನ ಸಾಂಸ್ಕೃತಿಕ ಹಾಗೂ ಕ್ರೀಡಾ ವಿದ್ಯಾರ್ಥಿಗಳ ಪಾತ್ರ ಹಿರಿದಾಗಿದೆ ಎಂದು ಮಂಗಳೂರು ವಿ.ವಿ. ಡೆಪ್ಯುಟಿ ರಿಜಿಸ್ಟ್ರಾರ್ ಪ್ರಭಾಕರ ನೀರುಮಾರ್ಗ ಹೇಳಿದ್ದಾರೆ.ಆಳ್ವಾಸ್ ಪದವಿ ಕಾಲೇಜಿನ 13ನೇ ವಾರ್ಷಿಕೋತ್ಸವವನ್ನು ವಿದ್ಯಾಗಿರಿಯ ಶಿವರಾಮ ಕಾರಂತ ವೇದಿಕೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯಪೂರಕ, ಪಠ್ಯೇತರ ಚಟುವಟಿಕೆಗಳನ್ನು ಸಮರ್ಪಕವಾಗಿ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಯೋಗ್ಯ ನಾಗರೀಕರನ್ನಾಗಿ ರೂಪಿಸುವ ಕಾರ್ಯ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದಾಗುತ್ತಿದೆ ಎಂದು ಪ್ರಶಂಸಿಸಿದರು.


ಮಂಗಳೂರು ವಿ.ವಿ.ಕಳೆದ ಮೇ ತಿಂಗಳಲ್ಲಿ ನಡೆಸಿದ ಪದವಿ, ಹಾಗೂ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮೆರೆದು ರ್ಯಾಂಕ್ ಗಳಿಸಿದ 20 ಮಂದಿ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಜಯರಾಮ ಕೋಟ್ಯಾನ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಪತಿ ಭಟ್, ಸಂಸ್ಥೆಯ ಆಡಳಿತಾಧಿಕಾರಿ ಡಾ.ಜಿ.ಎಚ್.ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದರು.
ಸಭಾಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ವಹಿಸಿದ್ದರು.
ಪ್ರಾಂಶುಪಾಲ ಪ್ರೊ.ಕುರಿಯನ್ ವಾರ್ಷಿಕ ವರದಿ ಮಂಡಿಸಿದರು. ಉಪನ್ಯಾಸಕ ವೆಂಕಟಕೃಷ್ಣ ಸ್ವಾಗತಿಸಿದರು. ಕಾವ್ಯ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕಿ ಸುರೇಖಾ ವಂದಿಸಿದರು.

0 comments:

Post a Comment