ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಮಂಗಳೂರು :ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಹಾಗೂ ಸಮಸ್ಯೆಗಳನ್ನು ನಿವಾರಿಸುವಲ್ಲಿ ಕಾನೂನು ಮತ್ತು ಸುವ್ಯವಸ್ಥೆ,ಆರೋಗ್ಯ ಮತ್ತು ಮಾನವ ಸಂಪನ್ಮೂಲಗಳು ಹಾಗೂ ಇತರೆ ಇಲಾಖೆಗಳು ಒದಗಿಸುತ್ತಿರುವ ಸೇವೆಗಳ ನಡುವೆ ಪರಿಣಾಮಕಾರಿ ಸಮನ್ವಯ ಮಾಡಲು ಹಾಗೂ ನಿಯಮಿತವಾಗಿ ಪರಿಶೀಲಿಸಲು ಈ ಕೆಳಕಂಡ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ತಾಲ್ಲೂಕು ತಹಶೀಲ್ದಾರರು ಅಧ್ಯಕ್ಷರಾಗಿದ್ದು,ಸದಸ್ಯರು ಗಳಾಗಿ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯರು,ಅರಕ್ಷಕ ವೃತ್ತ ನಿರೀಕ್ಷಕರು,ಸರ್ಕಾರಿ ಸಹಾಯಕ ಅಭಿಯೋಜಕರು,ತಾಲ್ಲೂಕು ಆರೋಗ್ಯಾಧಿಕಾರಿಗಳು, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕರು,ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಕಾರ್ಯ ನಿರ್ವಹಿಸುತ್ತಿರುವ ಒಂದು ಸೇವಾ ಸಂಸ್ಥೆ, ಹಾಗೂ ಒಂದು ರಕ್ಷಣಾ ಗೃಹದ ತಲಾ ಒಬ್ಬೊಬ್ಬ ಪ್ರತಿನಿಧಿಯನ್ನು ಅಧ್ಯಕ್ಷರು ನಾಮನಿರ್ದೇಶನ ಮಾಡುವರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ತಾಲ್ಲೂಕು ಸಂರಕ್ಷಣಾಧಿಕಾರಿಗಳು ಸಮಿತಿ ಸದಸ್ಯ ಕಾರ್ಯದರ್ಶಿ ಗಳಾಗಿರುತ್ತಾರೆ.ಈ ಸಮಿತಿಯು ನೊಂದ ಮಹಿಳೆಯರಿಗೆ ನ್ಯಾಯ ಒದಗಿಸುವಲ್ಲಿ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸ್ಥಾಪಿಸುವುದಾಗಿದೆಯೆಂದು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರು ತಿಳಿಸಿರುತ್ತಾರೆ.

0 comments:

Post a Comment