ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಜಪಾನ್ ನಲ್ಲಿ ಭೀಕರ ಸುನಾಮಿ ಅಪ್ಪಳಿಸಿದ ಹಿನ್ನಲೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮೀನುಗಾರಿಕೆಗೆ ತೆರಳಿದವರಿಗೆ ವಾಪಾಸಾಗಲು ತೆರಳಲು ಸೂಚಿಸಲಾಗಿದೆ. ಕರಾವಳಿಯಲ್ಲಿ ಮೀನುಗಾರಿಕೆ ನಡೆಸದಂತೆ ಸೂಚಿಸಲಾಗಿದೆ. ಕರಾವಳಿಯಲ್ಲಿ ಸಮುದ್ರ ಮಾಮೂಲು ಸ್ಥಿತಿಯಲ್ಲಿಲ್ಲ ಎಂಬ ಅಂಶ ತಿಳಿದುಬಂದಿದೆ. ಹವಾಮಾನದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ.ಕರಾವಳಿ ಕಾವಲು ಪಡೆಸನ್ನದ್ಧ ಸ್ಥಿತಿಯಲ್ಲಿದೆ. ಒಟ್ಟಿನಲ್ಲಿಎಲ್ಲೆಡೆಗಳಲ್ಲಿಯೂ ಸುನಾಮಿ ಭೀತಿ ಕಂಡುಬಂದಿದೆ.ಜನತೆ ಚಿಂತೆಗೀಡಾಗಿದೆ. 19 ದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಆಸ್ಟ್ರೇಲಿಯಾ, ಪೆರು, ಇಂಡೋನ್ಯೇಷ್ಯಾದಲ್ಲಿ ಕಟು ಎಚ್ಚರ ಘೋಷಿಸಲಾಗಿದೆ.ಹಾನಿಗೀಡಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಕ್ಕೆ ತಂಡಗಳನ್ನು ಕಳುಹಿಸಲಾಗಿದೆ.900ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ.

0 comments:

Post a Comment