ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ

ವೇಣೂರು: ಜೀವನದಲ್ಲಿ ಶಿಸ್ತು ಮುಖ್ಯ. ವಿದ್ಯಾರ್ಥಿ ದೆಸೆಯಲ್ಲಿಯೇ ಶಿಸ್ತು ರೂಢಿಸಿಕೊಳ್ಳುವ ಮೂಲಕ ಭವಿಷ್ಯರೂಪಿಸಿ ಎಂದು ಈ ಕನಸು.ಕಾಂ ಸಂಪಾದಕ ಹರೀಶ್ ಕೆ.ಆದೂರು ಕರೆನೀಡಿದರು.ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಪೆರಿಂಜೆ, ಫ್ರೆಂಡ್ಸ್ ಕ್ಲಬ್ ರಿ. ಹೊಸಂಗಡಿ ಮತ್ತು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಜೂ.18ರಂದು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಿ ಮಾತನಾಡಿದರು.45ಸಾವಿರ ರುಪಾಯಿ ಮೌಲ್ಯದ ನೋಟ್ ಬುಕ್ ಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಕಷ್ಟದಲ್ಲಿರುವವರನ್ನು ಗುರುತಿಸಿ ಅವರ ವಿದ್ಯಾಭ್ಯಾಸಕ್ಕೆ ಸಹಕಾರ ನೀಡುವ ಇಂತಹ ಕಾರ್ಯಕ್ರಮಗಳು ಅಲ್ಲಲ್ಲಿ ನಡೆಯಬೇಕೆಂದು ಆಶಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಧರ್ಮದರ್ಶಿ ಎ.ಜೀವಂಧರ್ ಕುಮಾರ್ ಮಾತನಾಡಿ ಮುಂದಿನ ಶೈಕ್ಷಣಿಕ ವರುಷದಲ್ಲಿ ಕ್ಷೇತ್ರದ ವತಿಯಿಂದ ಬಡ ಅರ್ಹ ಮಕ್ಕಳಿಗೆ ಹೆಚ್ಚಿನ ಪ್ರಯೋಜನವಾಗುವಂತೆ ಪುಸ್ತಕ ವಿತರಣೆ ಮಾಡಲಾಗುವುದು ಎಂದರು.
ಬೆಳ್ತಂಗಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸಿ.ಆರ್.ನರೇಂದ್ರ, ಹೊಸಂಗಡಿ ಗ್ರಾ.ಪಂ.ಅಧ್ಯಕ್ಷೆ ಲಕ್ಷ್ಮೀ ರಮೇಶ್, ಉಪಾಧ್ಯಕ್ಷ ಪದ್ಮರಾಜ್ ಪೇರಿ, ಪೆರಿಂಜೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆಲಿಯಬ್ಬ ಉಪಸ್ಥಿತರಿದ್ದರು.
ಜಿ.ಪಂ.ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಸ್ವಾಗತಿಸಿದರು. ಗ್ರಾ.ಪಂ.ಸದಸ್ಯ ಹರಿಪ್ರಸಾದ್ ಬಜೆ ಕಾರ್ಯಕ್ರಮ ನಿರ್ವಹಿಸಿದರು. ಫ್ರೆಂಡ್ಸ್ ಕ್ಲಬ್ ಕಾರ್ಯದರ್ಶಿ ಶ್ರೀಪತಿ ಭಟ್ ವಂದಿಸಿದರು.

0 comments:

Post a Comment