ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರಮೂಡಬಿದಿರೆ: ಆಳ್ವಾಸ್ ಎಜುಕೇಷನ್ ಫೌಂಡೇಷನ್ ಆಶ್ರಯದಲ್ಲಿ ನಡೆಯಲಿರುವ ಎಂಟನೇ ವರುಷದ " ಆಳ್ವಾಸ್ ನುಡಿಸಿರಿ" ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಆಳ್ವಾಸ್ ನುಡಿಸಿರಿ ರೂವಾರಿ, ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.
2006ರ ನುಡಿಸಿರಿಯ ಸರ್ವಾಧ್ಯಕ್ಷರಾಗಿದ್ದ ಚಂದ್ರಶೇಖರ ಕಂಬಾರರಿಗೆ ಸನ್ಮಾನ

ನವೆಂಬರ್ 11 ರಿಂದ 13ರ ತನಕ ಮೂಡಬಿದಿರೆ ವಿದ್ಯಾಗಿರಿಯಲ್ಲಿ "ಕನ್ನಡ ಮನಸ್ಸು ಸಂಘರ್ಷ ಮತ್ತು ಸಾಮರಸ್ಯ " ಪರಿಕಲ್ಪನೆಯಲ್ಲಿ ಈ ಬಾರಿಯ ಆಳ್ವಾಸ್ ನುಡಿಸಿರಿ ನಡೆಯಲಿದೆ. ಸರ್ವಾಧ್ಯಕ್ಷರಾಗಿ ಸಂಶೋಧಕ ಎಂ.ಎಂ.ಕಲಬುರ್ಗಿ ಸಮ್ಮೇಳನವನ್ನು ಮುನ್ನಡೆಸಲಿದ್ದಾರೆ.
ನವೆಂಬರ್ 13ರಂದು ನಡೆಯಲಿರುವ ಆಳ್ವಾಸ್ ನುಡಿಸಿರಿಯ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣವನ್ನು ಚಂದ್ರಶೇಖರ ಕಂಬಾರ ಮಾಡಲಿದ್ದಾರೆ. ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರರ ಸಮಗ್ರ ಸಾಹಿತ್ಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಗುವುದು.
2006ರಲ್ಲಿ ಕನ್ನಡ ಮನಸ್ಸು ಪ್ರಚಲಿತ ಪ್ರಶ್ನೆಗಳು ಪರಿಕಲ್ಪನೆಯಲ್ಲಿ ನಡೆದ ಆಳ್ವಾಸ್ ನುಡಿಸಿರಿಯ ಮೂರನೇ ವರುಷದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ಚಂದ್ರಶೇಖರ ಕಂಬಾರ ಸಮ್ಮೇಳನವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು.

0 comments:

Post a Comment