ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಮೂಡಬಿದಿರೆ: ಆಳ್ವಾಸ್ ಎಜುಕೇಷನ್ ಫೌಂಡೇಷನ್ ಆಶ್ರಯದಲ್ಲಿ ನಡೆಯಲಿರುವ ಎಂಟನೇ ವರುಷದ " ಆಳ್ವಾಸ್ ನುಡಿಸಿರಿ" ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ನಡೆಯುವ ಸಭಾಂಗಣಕ್ಕೆ ಪಂಡಿತ್ ಭೀಮ್ ಸೇನ್ ಜೋಷಿ ಸಭಾಂಗಣ ಎಂದು ನಾಮಕರಣ ಮಾಡಲಾಗಿದೆ ಎಂದು ಆಳ್ವಾಸ್ ನುಡಿಸಿರಿ ರೂವಾರಿ,ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.ನವೆಂಬರ್ 11, 12 ಮತ್ತು 13ರಂದು ಮೂಡಬಿದಿರೆಯ ವಿದ್ಯಾಗಿರಿಯಲ್ಲಿರುವ ಸುಂದರಿ ಆನಂದ ಆಳ್ವ ಆವರಣದಲ್ಲಿ ಆಳ್ವಾಸ್ ನುಡಿಸಿರಿ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ವೇದಿಕೆಗೆ ರತ್ನಾಕರ ವರ್ಣಿ ವೇದಿಕೆ ಎಂದು ನಾಮಕರಣ ಮಾಡಲಾಗಿದೆ.ಆಳ್ವಾಸ್ ನುಡಿಸಿರಿ - 2011ರ ಮೊದಲ ದಿನ ಬೆಳಗ್ಗೆ 9.15ರಿಂದ ಸಾಂಸ್ಕೃತಿಕ ಮೆರವಣಿಗೆ ಪ್ರಾರಂಭಗೊಳ್ಳಲಿದ್ದು, 10ಗಂಟೆಗೆ ಉದ್ಘಾಟನೆ ನಡೆಯಲಿದೆ. ಈ ಬಾರಿಯ ಆಳ್ವಾಸ್ ನುಡಿಸಿರಿಯ ಸರ್ವಾಧ್ಯಕ್ಷರಾಗಿ ಸಂಶೋಧಕ ಎಂ.ಎಂ.ಕಲಬುರ್ಗಿ ಸಮ್ಮೇಳನ ನಡೆಸಿಕೊಡಲಿದ್ದಾರೆ. ಬರಗೂರು ರಾಮಚಂದ್ರಪ್ಪ ನುಡಿಸಿರಿಯನ್ನು ಉದ್ಘಾಟಿಸುವರು."ಕನ್ನಡ ಮನಸ್ಸು ಸಂಘರ್ಷ ಮತ್ತು ಸಾಮರಸ್ಯ " ಪರಿಕಲ್ಪನೆಯಲ್ಲಿ ಈ ಬಾರಿಯ ಆಳ್ವಾಸ್ ನುಡಿಸಿರಿ ಸಮ್ಮೇಳನ ಮೂಡಿಬರಲಿದೆ.

0 comments:

Post a Comment