ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಬೆಂಗಳೂರು: ಡಾ.ಕೆ.ಎಸ್. ನಿಸಾರ್ ಅಹಮ್ಮದ್, ಡಾ.ಚಂದ್ರಶೇಖರ ಪಾಟೀಲ , ಡಾ.ಸಿ.ಎನ್ ರಾಮಚಂದ್ರನ್ ಸೇರಿದಂತೆ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಹತ್ತು ಮಂದಿಗೆ ಈ ಬಾರಿಯ ಆಳ್ವಾಸ್ ನುಡಿಸಿರಿ - 2011 ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ನುಡಿಸಿರಿಯ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಪ್ರದಾನ ಕಾರ್ಯಕ್ರಮ ನಡೆಯಲಿದೆ.ಪ್ರಶಸ್ತಿಯು ಪ್ರಶಸ್ತಿ ಪತ್ರ, ಸ್ಮರಣಿಕೆ, ಹತ್ತು ಸಾವಿರ ನಗದು ಸೇರಿದಂತೆ ಸಾಂಪ್ರದಾಯಿಕ ಸನ್ಮಾನಗಳನ್ನೊಳಗೊಂಡಿರುತ್ತವೆ.ನವೆಂಬರ್ 13ರಂದು ನಡೆಯಲಿರುವ ಆಳ್ವಾಸ್ ನುಡಿಸಿರಿಯ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಹಿರಿಯರಾದ ಡಾ.ಕೆ.ಎಸ್ ನಿಸಾರ್ ಅಹಮದ್, ಡಾ.ಚಂದ್ರಶೇಖರ ಪಾಟೀಲ, ಡಾ.ಸಿ.ಎನ್ ರಾಮಚಂದ್ರನ್, ಡಾ.ಎಂ.ವಿ.ಕಾಮತ್, ಡಾ.ಬಿ.ಟಿ. ಲಲಿತಾ ನಾಯಕ್, ಶ್ರೀನಾಥ್, ಬಿ.ಕೆ.ಸುಮಿತ್ರಾ, ಚಿದಂಬರ ರಾವ್ ಜಂಬೆ, ಪಾಂಡವಪುರ ಅಂಕೇಗೌಡ ಹಾಗೂ ಮಾಚಾರ್ ಗೋಪಾಲ ನಾಯ್ಕ ಈ ಬಾರಿಯ ಪ್ರಶಸ್ತಿಗೆ ಭಾಜನರಾಗುವವರು.

0 comments:

Post a Comment