ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಮಿಜಾರಿನಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ

ಮಂಗಳೂರು: ಆಳ್ವಾಸ್ ಎಜುಕೇಷನ್ ಫೌಂಡೇಷನ್ ಆಶ್ರಯದಲ್ಲಿ ನಡೆಯುತ್ತಿರುವ 20ನೇ ವರುಷದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ "ಆಳ್ವಾಸ್ ವಿರಾಸತ್ " ನ ರಾಷ್ಟ್ರೀಯ ಪ್ರಶಸ್ತಿಗೆ ಕೊಲ್ಕೋತ್ತಾದ ಖ್ಯಾತ ಹಿಂದೂಸ್ಥಾನೀ ಗಾಯಕ ಪದ್ಮಶ್ರೀ ಪಂಡಿತ್ ಅಜೋಯ್ ಚಕ್ರವರ್ತಿ ಆಯ್ಕೆಗೊಂಡಿದ್ದಾರೆ. ಜನವರಿ 5ರಿಂದ 8ರ ತನಕ ಮಿಜಾರು ಶೋಭಾವನದಲ್ಲಿ ಆಳ್ವಾಸ್ ವಿರಾಸತ್ 2012 ನಡೆಯಲಿದ್ದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ.5ರಂದು ನಡೆಯಲಿದೆ ಎಂದು ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.ಅಜೋಯ್ ಚಕ್ರವರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ, ರಾಷ್ಟ್ರೀಯ ಪ್ರಶಸ್ತಿ, ಕುಮಾರ ಗಂಧರ್ವ ಪ್ರಶಸ್ತಿ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿ ಸನ್ಮಾನಗಳು ಈಗಾಗಲೇ ಲಭಿಸಿವೆ. ಇದೀಗ ಈ ಬಾರಿಯ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯಂಗ ಗೌರವಪೂರ್ವಕವಾಗಿ ನೀಡಿ ಸನ್ಮಾನಿಸಲಾಗುತ್ತದೆ.ಆಳ್ವಾಸ್ ವಿರಾಸತ್ ರಾಷ್ಟ್ರೀಯ ಪ್ರಶಸ್ತಿಯು 1ಲಕ್ಷ ನಗದು, ಸ್ಮರಣಿಕೆ, ಸನ್ಮಾನ ಪತ್ರ, ಸಾಂಪ್ರದಾಯಿಕ ಗೌರವಗಳನ್ನೊಳಗೊಂಡಿರುತ್ತದೆ.

0 comments:

Post a Comment