ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ
ಬೆಂಗಳೂರು/ಉಡುಪಿ:ಸರಳ ಸಜ್ಜನ ರಾಜಕಾರಣಿ, ಹಿರಿಯ ರಾಜಕೀಯ ಮುತ್ಸದ್ದಿ , ಉನ್ನತ ಶಿಕ್ಷಣ ಸಚಿವ ಡಾ.ವೇದವ್ಯಾಸ ಶ್ರೀನಿವಾಸ ಆಚಾರ್ಯ (ವಿ.ಎಸ್.ಆಚಾರ್ಯ)ಫೆ.14ರಂದು ಹಠಾತ್ ನಿಧನಹೊಂದಿದ್ದಾರೆ. ಅವರಿಗೆ 71ವರ್ಷ ವಯಸ್ಸಾಗಿತ್ತು. ಹಠಾತ್ ದೇಹಸ್ಥಿತಿ ಗಂಭೀರಗೊಂಡ ಅವರನ್ನು ಮಲ್ಲಿಗೆ ನರ್ಸಿಂಗ್ ಹೋಮ್ ಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಕಾಲೇಜೊಂದರ ಸಮಾರಂಭದಲ್ಲಿ ಪಾಲ್ಗೊಂಡ ಸಂದರ್ಭ ವೇದಿಕೆಯಲ್ಲಿ ಡಾ.ಆಚಾರ್ಯ ಕುಸಿದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು.ಮಂಗಳೂರಿನಿಂದ ಮಧ್ಯಾಹ್ನ ಬೆಂಗಳೂರಿಗೆ ವಿಮಾನ ಮೂಲಕ ತೆರಳಿದ್ದ ಆಚಾರ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿತು.
ದ್ದಾರೆ.


ಮುಖ್ಯಮಂತ್ರಿ ಕಂಬನಿ
ವಿ.ಎಸ್.ಆಚಾರ್ಯ ನಿಧನಕ್ಕೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತೀವ್ರ ಕಂಬನಿ ಮಿಡಿದಿದ್ದಾರೆ. ಮಲ್ಲಿಗೆ ಆಸ್ಪತ್ರೆಗೆ ಧಾವಿಸಿದ ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಸೇರಿದಂತೆ ಅನೇಕ ಮಂದಿ ಹಿರಿಯ ಗಣ್ಯರು, ರಾಜಕಾರಣಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.ಇಂದು ಸಂಜೆ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಉಡುಪಿಯಲ್ಲಿ ನಡೆಯಲಿದೆ.

ಎರಡು ದಿನಗಳ ಶೋಕಾಚರಣಿ - ರಜೆ
ಹಿರಿಯ ರಾಜಕಾರಣಿ ನಿಧನಕ್ಕೆ ಎರಡು ದಿನಗಳ ಕಾಲ ಶೋಕಾಚರಣೆ ನಡೆಸಲು ನಿರ್ಣಯಿಸಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

0 comments:

Post a Comment