ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ 'ಬೆಳದಿಂಗಳ ಚಿಂತನ' ಕಾರ್ಯಕ್ರಮದಲ್ಲಿ ಹೆಸರಾಂತ ಸಾಹಿತಿ, ಚಲನಚಿತ್ರ ಗೀತೆ ರಚನೆಕಾರ ಡಾ.ಜಯಂತ ಕಾಯ್ಕಿಣಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮವು ಆಗಸ್ಟ್ 2, ಗುರುವಾರದಂದು ಸಂಜೆ ಆರು ಗಂಟೆಗೆ ವಿದ್ಯಾಗಿರಿಯ ಕು.ಶಿ.ಹರಿದಾಸ ಭಟ್ಟ ವೇದಿಕೆಯಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.


ಕಥನ ಕುತೂಹಲ ಎಂಬ ವಿಷಯದಲ್ಲಿ ಜಯಂತ್ ಕಾಯ್ಕಿಣಿ ಮಾತನಾಡಲಿದ್ದಾರೆ. ಉಪನ್ಯಾಸದ ಬಳಿಕ ಸಾರ್ವಜನಿಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಆಸಕ್ತ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.

0 comments:

Post a Comment