ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ಮಂಗಳೂರು: ಶಿಕ್ಷಕ ವೃತ್ತಿಯ ಜೀವಮಾನದ ಗಳಿಕೆಯಾದ 20 ಲಕ್ಷ ರೂಪಾಯಿಗಳನ್ನು ಮಂಗಳೂರಿನ ಶ್ರೀ ಭಾರತಿ ಸಮೂಹ ಸಂಸ್ಥೆಗಳಿಗೆ ದೇಣಿಗೆಯಾಗಿ ನೀಡಿದ ನಿವೃತ್ತ ಮುಖ್ಯೋಪಾಧ್ಯಾಯ ಜಿ. ರಾಮಕೃಷ್ಣ ಭಟ್ ಅವರನ್ನು ಹೊಸನಗರ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳು ಇತ್ತೀಚೆಗೆ ನಡೆದ ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

1946ರಲ್ಲಿ ಜನಿಸಿದ ರಾಮಕೃಷ್ಣ ಭಟ್ಟರು 1966ರಲ್ಲಿ ಶಿಕ್ಷಕರಾಗಿ ವೃತ್ತಿಜೀವನ ಆರಂಭಿಸಿದರು. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ತಾವು ಕಾರ್ಯನಿರ್ವಹಿಸಿದ ಎಲ್ಲಾ ಶಾಲೆಗಳಲ್ಲಿ ಶಾಶ್ವತ ನಿಧಿಯನ್ನು ಅವರು ಸ್ಥಾಪಿಸಿದ್ದಾರೆ. ರಾಮಕೃಷ್ಣ ಭಟ್ ಅವರು ಪುತ್ತೂರು ಸಾಮೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ 1999ರಲ್ಲಿ ನಿವೃತ್ತರಾದರು.

1976ರಲ್ಲಿ ’ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ. ಇದಲ್ಲದೇ ಹಲವು ಪುರಸ್ಕಾರಗಳು ರಾಮಕೃಷ್ಣ ಭಟ್ ಅವರಿಗೆ ಒಲಿದಿದೆ. ಈಗ ನಿವೃತ್ತ ಜೀವನವನ್ನು ಅನುಭವಿಸುತ್ತಿರುವ ರಾಮಕೃಷ್ಣ ಭಟ್ ಅವರು ತಮ್ಮ ಜೀವಮಾನದ ಗಳಿಕೆಯಾದ 20ಲಕ್ಷ ರೂಪಾಯಿಗಳನ್ನು ಭಾರತೀ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ನೀಡುವುದರ ಮೂಲಕ ದೊಡ್ಡತನ ಮೆರೆದಿದ್ದಾರೆ.

0 comments:

Post a Comment