ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ - ಉಪ ಪ್ರಾಂಶುಪಾಲರುಗಳ ನೇಮಕ

ಮಂಗಳೂರು: ನಿಟ್ಟೆ ಎನ್. ಎಮ್. ಎ. ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸುಮಾರು 27 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅಧ್ಯಾಪಕರಾಗಿ, ಪ್ರೋಫೆಸರ್ ಆಗಿ, ಸಿವಿಲ್ ವಿಭಾಗದ ಮುಖ್ಯಸ್ಥರಾಗಿ ಹಾಗೂ ನಿಟ್ಟೆ ಉದ್ಯಮಶೀಲತಾ ಅಭಿವೃಧ್ದಿ ಘಟಕದ ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸಿದ ಡಾ| ಐ. ಆರ್. ಮಿತ್ತಂತಾಯರವರು ಎನ್. ಎಮ್. ಎ. ಎಮ್ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲರು ಮತ್ತು ಡೀನ್ (ಶೈಕ್ಷಣಿಕ) ಆಗಿ ಅಧಿಕಾರ ವಹಿಸಿಕೊಂಡಿರುತ್ತಾರೆ.


ನಿಟ್ಟೆ ಎನ್. ಎಮ್. ಎ. ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸುಮಾರು 23 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅಧ್ಯಾಪಕರಾಗಿ, ಪ್ರೋಫೆಸರ್ ಆಗಿ, ಹಾಗೂ ಪರೀಕ್ಷಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ ಡಾ| ಶ್ರೀನಿವಾಸ್ರಾವ್ ಬಿ. ಆರ್ ರವರು ಎನ್. ಎಮ್. ಎ. ಎಮ್ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲ ರಾಗಿ ಅಧಿಕಾರ ವಹಿಸಿಕೊಂಡಿರುತ್ತಾರೆ.

0 comments:

Post a Comment