ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...
7:45 PM

ಯೋಗ ತರಬೇತಿ

Posted by ekanasu

ಪ್ರಾದೇಶಿಕ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆಯಡಿಯಲ್ಲಿ ರಾಜ್ಯಮಟ್ಟದ ಆಯ್ಕೆ ಶಿಬಿರ ಮತ್ತು ನಾಯಕತ್ವ ತರಬೇತಿ ಶಿಬಿರ ಕೊಣಾಜೆಯಲ್ಲಿ ನಡೆಯಿತು. ಶಿಬಿರದಲ್ಲಿ ಸುಮಾರು 320ಕ್ಕೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಎನ್.ಸಿ.ಸಿ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ತೀರ್ಪುಗಾರರಾದ ಯೋಗ ರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ಮುಂಜಾನೆ ಹೊತ್ತಿನಲ್ಲಿ ಯೋಗ ತರಬೇತಿ ನೀಡಿದರು. ಈ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ಕ್ರಿಯೆಗಳು, ಮುದ್ರೆಗಳು, ಸರಳ ವ್ಯಾಯಾಮಗಳು ಸೂರ್ಯ ನಮಸ್ಕಾರ ಅಗತ್ಯವಿರುವ ಯೋಗಾಸನಗಳು, ಪ್ರಾಣಯಾಮಗಳು ಮತ್ತು ಧ್ಯಾನವನ್ನು ತಿಳಿಸಿಕೊಡಲಾಯಿತು.


ಹಾಗೂ ವಿದ್ಯಾರ್ಥಿಗಳ ಏಕಾಗ್ರತೆಗೆ, ಆರೋಗ್ಯ ರಕ್ಷಣೆಗೆ ಮತ್ತು ಉತ್ತಮ ಜೀವನ ಶೈಲಿಯ ಬಗ್ಗೆಯ ಮಾಹಿತಿಯನ್ನು ತಿಳಿಸಿಕೊಡಲಾಯಿತು. ದೇಲಂಪಾಡಿಯವರ ಶಿಷ್ಯರು ಈ ಶಿಬಿರಕ್ಕೆ ಸಹಕಾರ ನೀಡಿದರು. ಈ ತರಬೇತಿ ನೀಡಿದ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರನ್ನು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಘಟಕರು ಗೌರವಿಸಿದರು.

0 comments:

Post a Comment