ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

16 ಸಾವಿರ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಆಳ್ವಾಸ್ ಎಜುಕೇಷನ್ ಫೌಂಡೇಷನ್ ಆಶ್ರಯದಲ್ಲಿ ನಡೆದ ಸ್ವಾತಂತ್ರ್ಯೋತ್ಸವ


ಮೂಡಬಿದಿರೆಯ ಆಳ್ವಾಸ್ ಎಜುಕೇಷನ್ ಫೌಂಡೇಷನ್ ಆಶ್ರಯದಲ್ಲಿ ಆ.15ರಂದು ವಿದ್ಯಾಗಿರಿ ಸುಂದರಿ ಆನಂದ ಆಳ್ವ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. 16ಸಾವಿರ ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ನಭೂತೋ ಎಂಬಂತೆ ಭಾಸವಾಯಿತು. ನವದೆಹಲಿಯನ್ನು ಬಿಟ್ಟರೆ ಇಷ್ಟೊಂದು ಸುಸಜ್ಜಿತ ಹಾಗೂ ಬೃಹತ್ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ ಇದೊಂದೇ ಎಂಬುದು ಮತ್ತೊಮ್ಮೆ ಸಾಬೀತಾಗುವಂತಾಯಿತು.ಕೇಸರಿ ಬಿಳಿ ಹಸಿರು ವರ್ಣಗಳಲ್ಲಿ ಗೋಚರಿಸಿದ "ಆಳ್ವಾಸ್", ತಿರಂಗ ಧ್ವಜದೊಂದಿಗೆ ಸಂಭ್ರಮಿಸಿದ ಸಹಸ್ರ ಸಹಸ್ರ ಸಂಖ್ಯೆಯ ವಿದ್ಯಾರ್ಥಿ ವೃಂದ... ಹೀಗೆ ಸ್ವಾತಂತ್ರ್ಯೋತ್ಸವವನ್ನು ಅರ್ಥಗರ್ಭಿತವಾಗಿ ಆಚರಿಸಲಾಯಿತು. ನ್ಯಾ.ಸಂತೋಷ್ ಹೆಗ್ಡೆ ಧ್ವಜಾರೋಹಣ ಗೈದರು. ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉಪಸ್ಥಿತರಿದ್ದರು.

- ಹರೀಶ್ ಕೆ.ಆದೂರು

0 comments:

Post a Comment