ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ

ಬೆಂಗಳೂರು: ವಾರ್ತಾ ಇಲಾಖೆವತಿಯಿಂದ ಆಗಸ್ಟ್ 27 ರಂದು ಬೆಳಿಗ್ಗೆ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ 2010 ಮತ್ತು 2011ರ ಟೀಯೆಸ್ಸಾರ್ ಸ್ಮಾರಕ, ಮೊಹರೆ ಹಣಮಂತರಾಯ, ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.ಟೀಯೆಸ್ಸಾರ್ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಪ್ರಧಾನ ಮಾಡುವರು. ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪ್ರಧಾನ ಮಾಡುವರು. ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಉಪಮುಖ್ಯಮಂತ್ರಿ ಆರ್.ಅಶೋಕ್ ಪ್ರಧಾನ ಮಾಡುವರು.ಪ್ರಶಸ್ತಿ ವಿಜೇತರು
ಅ. ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ


1. 2010 ಜಿ. ಎನ್. ರಂಗನಾಥ ರಾವ್
2. 2011 ಗರುಡನಗಿರಿ ನಾಗರಾಜ್

ಆ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ


2010 ಶ್ರೀ ಶಿವಶರಣಪ್ಪ ವಾಲಿ
2011 ಶ್ರೀ ಎಂ. ಬಿ, ದೇಸಾಯಿ

ಇ. ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ


2010 ಶ್ರೀ ಕೆ. ವಿ. ಪರಮೇಶ್
2011 ಶ್ರೀ ರವೀಂದ್ರ ಭಟ್ಟ ಐನಕೈ

ಈ. ಪರಿಸರ ಪತ್ರಿಕೋದ್ಯಮ ಪ್ರಶಸ್ತಿ


2010 ಶ್ರೀ ನಾರಾಯಣ ಕಾರಂತ ಪರಾಜೆ
2011 ಶ್ರೀ ಅಜ್ಜಮಾಡ ರಮೇಶ್ ಕುಟ್ಟಪ್ಪ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಾ.ಹೇಮಚಂದ್ರ ಸಾಗರ್ ವಹಿಸುವರು. ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ಶ್ರೀ ಅನಂತಕುಮಾರ್, ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಹಾಗೂ 2010 ಮತ್ತು 2011 ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಜಿ.ಪಿ.ಶಿವಪ್ರಕಾಶ್ ಭಾಗವಹಿಸುವರು.

0 comments:

Post a Comment