ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ ಸುದ್ದಿ: ಮೂಡಬಿದಿರೆ(Moodbidri) ವರದಿ

ನವೆಂಬರ್ ನಲ್ಲಿ "ಆಳ್ವಾಸ್ ನುಡಿಸಿರಿ "

ಆಳ್ವಾಸ್ ಎಜುಕೇಷನ್ ಫೌಂಡೇಷನ್ ಆಶ್ರಯದಲ್ಲಿ ನಡೆಯುತ್ತಿರುವ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ಇದೀಗ 9ರ ಹರೆಯ. ಈ ಬಾರಿಯ ಆಳ್ವಾಸ್ ನುಡಿಸಿರಿ ನವೆಂಬರ್ 16,17 ಮತ್ತು 18 ರಂದು ಮೂಡಬಿದಿರೆಯ ವಿದ್ಯಾಗಿರಿಯಲ್ಲಿ ಅತ್ಯಂತ ವಿಜೃಂಭಣೆಯಿಂದ ಅಷ್ಟೇ ಅರ್ಥಪೂರ್ಣವಾಗಿ, ಶಿಸ್ತುಬದ್ಧ ರೀತಿಯಲ್ಲಿ ನಡೆಯಲಿದೆ ಎಂದು ಆಳ್ವಾಸ್ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

" ಕನ್ನಡ ಮನಸ್ಸು : ಜನಪರ ಚಳುವಳಿಗಳು " ಎಂಬ ಪ್ರಮುಖ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ಈ ಬಾರಿಯ ಆಳ್ವಾಸ್ ನುಡಿಸಿರಿ ಮೂಡಿಬರಲಿದೆ. ಮೂರು ವಿಶೇಷ ಉಪನ್ಯಾಸಗಳು, ನಾಲ್ಕು ಕಥಾ ಸಮಯ, 9 ಕವಿಸಮಯ ಕವಿನಮನ, 3 ಸಂಸ್ಮರಣಾ ಗೋಷ್ಠಿಗಳು, ಹತ್ತು ಮಂದಿ ಸಾಧಕರಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ ಪ್ರದಾನ, ವಿಶೇಷ ಸನ್ಮಾನ ಕಾರ್ಯಕ್ರಮ, ಸಮಾನಾಂತರ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನವೆಂಬರ್ 16ರಂದು ಸಮ್ಮೇಳನಾಧ್ಯಕ್ಷರ ಮೆರವಣಿಗೆಯೊಂದಿಗೆ ಉದ್ಘಾಟನೆ ನಡೆಯಲಿದೆ.


ಮುಂದಿನ ವರುಷ ಆಳ್ವಾಸ್ ನುಡಿಸಿರಿಗೆ ದಶಕದ ಸಂಭ್ರಮ. ಈ ಹಿನ್ನಲೆಯಲ್ಲಿ ಈ ಬಾರಿಯ ಆಳ್ವಾಸ್ ನುಡಿಸಿರಿ ಅತ್ಯಂತ ಮಹತ್ವಪೂರ್ಣವಾಗಿದೆ. ದಶಕದ ಸಂಭ್ರಮದ ನುಡಿಸಿರಿಯನ್ನು ವಿಶ್ವಮಟ್ಟದಲ್ಲಿ ನಡೆಸಲುದ್ದೇಶಿಸಲಾಗಿದ್ದು, ಅದರ ಪೂರ್ವಭಾವಿಯಾಗಿ ಈ ಬಾರಿಯ ನುಡಿಸಿರಿಯಿಂದಲೇ ಕೆಲಸ ಕಾರ್ಯಗಳು ಆರಂಭಗೊಳ್ಳಲಿದೆ. ಈಗಾಗಲೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಳ್ವಾಸ್ ನುಡಿಸಿರಿ ಘಟಕಗಳನ್ನು ರಚಿಸಿ ಆ ಮೂಲಕ ಜನತೆಯಲ್ಲಿ ನುಡಿಸಿರಿಯ ಸ್ಪಷ್ಟ ಕಲ್ಪನೆ ಮೂಡುವಂತಹ ಕಾರ್ಯಕ್ರಮ ರೂಪಿಸಲಾಗಿದೆ.

ಯುವ ಜನತೆಯಲ್ಲಿ, ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ಸಾಹಿತ್ಯದ ಬಗೆಗಿನ ಆಸಕ್ತಿ ಮೂಡಿಸುವಂತಹ ಕಾರ್ಯಗಳನ್ನು ಮಾಡುವ ಸದುದ್ದೇಶದಿಂದ ಈ ಬಾರಿಯೂ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗುತ್ತದೆ. ನಾಡು, ಹೊರನಾಡು, ಹೊರ ರಾಜ್ಯಗಳಿಂದ ಆಳ್ವಾಸ್ ನುಡಿಸಿರಿಗೆ ಪ್ರತಿನಿಧಿಗಳಾಗಿ ಸಾಹಿತ್ಯಾಸಕ್ತರು ಆಗಮಿಸಬೇಕು ಎಂಬ ಆಶಯ ನಮ್ಮದು ಎಂದು ಡಾ.ಆಳ್ವ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಎಜುಕೇಷನ್ ಫೌಂಡೇಷನ್ ನ ಮಾಧ್ಯಮ ಸಂಪರ್ಕಾಧಿಕಾರಿ, ಉಪನ್ಯಾಸಕ ಹರೀಶ್ ಕೆ ಆದೂರು ಹಾಜರಿದ್ದರು.

0 comments:

Post a Comment