ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ ಸುದ್ದಿ : ಮಂಗಳೂರು ವರದಿ


ಆಳ್ವಾಸ್ ಎಜುಕೇಷನ್ ಫೌಂಡೇಷನ್ ಆಶ್ರಯದಲ್ಲಿ ನಡೆಯುತ್ತಿರುವ ಒಂಭತ್ತನೇ ವರುಷದ "ಆಳ್ವಾಸ್ ನುಡಿಸಿರಿ -2012 " ಇದರ ಸರ್ವಾಧ್ಯಕ್ಷತೆಗೆ ಕವಿ, ಸಾಹಿತಿ ಡಾ.ಕೆ.ಎಸ್.ನಿಸಾರ್ ಅಹ್ಮದ್ ಅವರನ್ನು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನುಡಿಸಿರಿ ಸ್ವಾಗತ ಸಮಿತಿ ಒಮ್ಮತದಿಂದ ಈ ಆಯ್ಕೆ ನಡೆಸಿದೆ ಎಂದು ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಉದ್ಘಾಟನೆಯನ್ನು ನಾಡಿನ ಹಿರಿಯ ಸಾಹಿತಿ ಡಾ.ಯು.ಆರ್.ಅನಂತ ಮೂರ್ತಿ ನಡೆಸಿಕೊಡಲಿದ್ದಾರೆ. ಈ ಬಾರಿಯ ಆಳ್ವಾಸ್ ನುಡಿಸಿರಿ ನವೆಂಬರ್ 16,17 ಮತ್ತು 18 ರಂದು ಮೂಡಬಿದಿರೆಯ ವಿದ್ಯಾಗಿರಿಯಲ್ಲಿ ಅತ್ಯಂತ ವಿಜೃಂಭಣೆಯಿಂದ ಅಷ್ಟೇ ಅರ್ಥಪೂರ್ಣವಾಗಿ, ಶಿಸ್ತುಬದ್ಧ ರೀತಿಯಲ್ಲಿ ನಡೆಯಲಿದೆ . ವಿಶೇಷ ಪರಿಕಲ್ಪನೆ " ಕನ್ನಡ ಮನಸ್ಸು : ಜನಪರ ಚಳುವಳಿಗಳು " ಎಂಬ ಪ್ರಮುಖ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ಈ ಬಾರಿಯ ಆಳ್ವಾಸ್ ನುಡಿಸಿರಿ ಮೂಡಿಬರಲಿದೆ. ಮೂರು ವಿಶೇಷ ಉಪನ್ಯಾಸಗಳು, ನಾಲ್ಕು ಕಥಾ ಸಮಯ, 9 ಕವಿಸಮಯ ಕವಿನಮನ, 3 ಸಂಸ್ಮರಣಾ ಗೋಷ್ಠಿಗಳು, ಹತ್ತು ಮಂದಿ ಸಾಧಕರಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ ಪ್ರದಾನ, ವಿಶೇಷ ಸನ್ಮಾನ ಕಾರ್ಯಕ್ರಮ, ಸಮಾನಾಂತರ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನವೆಂಬರ್ 16ರಂದು ಸಮ್ಮೇಳನಾಧ್ಯಕ್ಷರ ಮೆರವಣಿಗೆಯೊಂದಿಗೆ ಉದ್ಘಾಟನೆ ನಡೆಯಲಿದೆ. ಶತಾಯುಷಿಗೆ ವಿಶೇಷ ಗೌರವ ಕನ್ನಡ ನಾಡು ನುಡಿಗೆ ವಿಶೇಷ ಸೇವೆ ಸಲ್ಲಿಸಿರುವ, ವಿದ್ವಾಂಸ ನಿಘಂಟು ಶಾಸ್ತ್ರ, ಪ್ರಾಚೀನ ಸಾಹಿತ್ಯಾಧ್ಯಯನದಲ್ಲಿ ಸಾಧನೆ ಮೆರೆದ ಶತಾಯುಷಿ ಪ್ರೊ.ಜಿ.ವೆಂಕಟ ಸುಬ್ಬಯ್ಯ ಅವರನ್ನು ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಲಾಗುವುದು. 2007ರಲ್ಲಿ ನಡೆದ ನಾಲ್ಕನೇ ವರುಷದ ಆಳ್ವಾಸ್ ನುಡಿಸಿರಿಯ ಸವರ್ಾಧ್ಯಕ್ಷತೆಯನ್ನು ವೆಂಕಟ ಸುಬ್ಬಯ್ಯರವರು ವಹಿಸಿದ್ದರು. ದಶಕದ ಸಂಭ್ರಮ ಮುಂದಿನ ವರುಷ ಆಳ್ವಾಸ್ ನುಡಿಸಿರಿಗೆ ದಶಕದ ಸಂಭ್ರಮ. ಈ ಹಿನ್ನಲೆಯಲ್ಲಿ ಈ ಬಾರಿಯ ಆಳ್ವಾಸ್ ನುಡಿಸಿರಿ ಅತ್ಯಂತ ಮಹತ್ವಪೂರ್ಣವಾಗಿದೆ. ದಶಕದ ಸಂಭ್ರಮದ ನುಡಿಸಿರಿಯನ್ನು ವಿಶ್ವಮಟ್ಟದಲ್ಲಿ ನಡೆಸಲುದ್ದೇಶಿಸಲಾಗಿದ್ದು, ಅದರ ಪೂರ್ವಭಾವಿಯಾಗಿ ಈ ಬಾರಿಯ ನುಡಿಸಿರಿಯಿಂದಲೇ ಕೆಲಸ ಕಾರ್ಯಗಳು ಆರಂಭಗೊಳ್ಳಲಿದೆ. ಈಗಾಗಲೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಳ್ವಾಸ್ ನುಡಿಸಿರಿ ಘಟಕಗಳನ್ನು ರಚಿಸಿ ಆ ಮೂಲಕ ಜನತೆಯಲ್ಲಿ ನುಡಿಸಿರಿಯ ಸ್ಪಷ್ಟ ಕಲ್ಪನೆ ಮೂಡುವಂತಹ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿನಿಧಿಗಳಾಗಿ ಬನ್ನಿ ಯುವ ಜನತೆಯಲ್ಲಿ, ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ಸಾಹಿತ್ಯದ ಬಗೆಗಿನ ಆಸಕ್ತಿ ಮೂಡಿಸುವಂತಹ ಕಾರ್ಯಗಳನ್ನು ಮಾಡುವ ಸದುದ್ದೇಶದಿಂದ ಈ ಬಾರಿಯೂ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗುತ್ತದೆ. ನಾಡು, ಹೊರನಾಡು, ಹೊರ ರಾಜ್ಯಗಳಿಂದ ಆಳ್ವಾಸ್ ನುಡಿಸಿರಿಗೆ ಪ್ರತಿನಿಧಿಗಳಾಗಿ ಸಾಹಿತ್ಯಾಸಕ್ತರು ಆಗಮಿಸಬೇಕು. ಪ್ರತಿನಿಧಿಗಳಾಗುವವರು ರು.100ನ್ನು ಕಾರ್ಯಾಧ್ಯಕ್ಷರು, ಆಳ್ವಾಸ್ ನುಡಿಸಿರಿ ಹೆಸರಿನಲ್ಲಿ ಎಂ.ಒ, ಡಿ.ಡಿ. ಮೂಲಕ ಸಲ್ಲಿಸಬಹುದು. ಪ್ರತಿನಿಧಿಗಳಿಗೆ ವಸತಿ, ಊಟದ ವ್ಯವಸ್ಥೆಯನ್ನು ಮಾಡಲಾಗುವುದು. ನುಡಿಸಿರಿ ಘಟಕ 2013ರಲ್ಲಿ ನಡೆಯಲಿರುವ ವಿಶ್ವ ನುಡಿಸಿರಿಯ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ಆಳ್ವಾಸ್ ನುಡಿಸಿರಿಯ ಘಟಕಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸ್ಥಾಪಿಸಲುದ್ದೇಶಿಸಲಾಗಿದೆ. ಈಗಾಗಲೇ ತುಮುಕೂರು, ಮೈಸೂರು, ಧಾರಾವಾಡ,ಚಿಕ್ಕಮಗಳೂರು, ಮಂಡ್ಯ,ತೀರ್ಥಹಳ್ಳಿ,ಮಂಗಳೂರು, ಕುಂದಾಪುರ, ಪುತ್ತೂರು,ಬಂಟ್ವಾಳ, ಬೆಳ್ತಂಗಡಿ, ಭಾಗಗಳಲ್ಲಿ ಘಟಕ ಸ್ಥಾಪಿಸಿ ಕಾರ್ಯಕ್ರಮಗಳನ್ನು ನಡೆಸಿಕೊಡಲಾಗಿದೆ. ಇದೇ 28ರಂದು ದಾವಣಗೆರೆ ದಂತ ವೈದ್ಯಕೀಯ ಕಾಲೇಜು ಆವರಣದ ಬಾಪೂಜಿ ಆಡಿಟೋರಿಯಂನಲ್ಲಿ , 29ರಂದು ಧಾರಾವಾಡದ ಜೆ.ಎಸ್.ಎಸ್. ಮಹಾವಿದ್ಯಾಲಯದ ಆವರಣದಲ್ಲಿ ಹಾಗೂ 30ರಂದು ಗದಗದ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ಘಟಕಗಳ ಉದ್ಘಾಟನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಎಜುಕೇಷನ್ ಫೌಂಡೇಷನ್ ನ ಮಾಧ್ಯಮ ಸಂಪರ್ಕಾಧಿಕಾರಿ ಹರೀಶ್ ಕೆ.ಆದೂರು, ಉಪನ್ಯಾಸಕರುಗಳಾದ ಡಾ.ಧನಂಜಯ ಕುಂಬ್ಳೆ, ವೇಣುಗೋಪಾಲ್ ಶೆಟ್ಟಿ ಉಪಸ್ಥಿತರಿದ್ದರು.

0 comments:

Post a Comment