ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ : ಮೂಡಬಿದಿರೆ ವರದಿ
ಬ್ರಾಹ್ಮಣ ಸಭಾ ಟ್ರಸ್ಟ್ ರಿ.ಮೂಡಬಿದಿರೆ ಮತ್ತು ಬ್ರಾಹ್ಮಣ ಸಭಾ ಮೂಡಬಿದಿರೆ ಇದರ ಸಂಯುಕ್ತಾಶ್ರಯದಲ್ಲಿ ಅ.14 ರವಿವಾರ ಆಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನುಗ್ರಹ ಸಭಾ ಭವನದಲ್ಲಿ ವಿಪ್ರ ಸಮಾವೇಶ 2012ನಡೆಯಲಿದೆ. ರಾಜ್ಯ ಧಾರ್ಮಿಕ ಪರಿಷದ್ ಸದಸ್ಯ ವೇದಮೂರ್ತಿ ಪಂಜ ಭಾಸ್ಕರ ಭಟ್ ಪ್ರಧಾನ ಉಪನ್ಯಾಸ ನೀಡಲಿದ್ದಾರೆ. ಪ್ರಧಾನ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತ ಶ್ರೀಕಾಂತ್ ರಾವ್ ಭಾಗವಹಿಸುವರು. ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಅಡಿಗಳ್ ಶ್ರೀನಿವಾಸ್ ಭಟ್ ಅವರನ್ನು ಸನ್ಮಾನಿಸಲಾಗುವುದು. ಬೆಳಗ್ಗೆ 9ರಿಂದ ಸಮಾಜ ಬಾಂಧವರಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಮಧ್ಯಾಹ್ನ 2.30ರಿಂದ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ ಅಗ್ನಿಭೇಷಜ ಯಕ್ಷಗಾನ ತಾಳಮದ್ದಲೆ ನಡೆಯಲಿದೆ.

0 comments:

Post a Comment