ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ರಾಜ್ಯ - ರಾಷ್ಟ್ರ ಸುದ್ದಿ: ಮಡಿಕೇರಿ ವರದಿ
"ಕನ್ನಡ ಮನಸ್ಸು : ಸಂಘರ್ಷ ಮತ್ತು ಸಾಮರಸ್ಯ" ಇದರ ಅನಾವರಣ
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಒಂಭತ್ತನೇ ವರುಷದ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ "ಆಳ್ವಾಸ್ ನುಡಿಸಿರಿ - 2012 " ಇದೇ ನವೆಂಬರ್ 16,17 ಮತ್ತು 18ರಂದು ಮೂಡಬಿದಿರೆ ವಿದ್ಯಾಗಿರಿಯಲ್ಲಿರುವ ಸುಂದರಿ ಆನಂದ ಆಳ್ವ ಆವರಣದಲ್ಲಿ ನಡೆಯಲಿದೆ. "ಕನ್ನಡ ಮನಸ್ಸು : ಜನಪರ ಚಳವಳಿಗಳು" ಎಂಬ ಪ್ರಮುಖ ಪರಿಕಲ್ಪನೆಯಲ್ಲಿ ಈ ಬಾರಿಯ ನುಡಿಸಿರಿ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ನಾಡಿನ ಹಿರಿಯ ಕವಿ ನಾಡೋಜ ಡಾ.ಕೆ.ಎಸ್.ನಿಸಾರ್ ಅಹಮದ್ ವಹಿಸಲಿದ್ದು, ಉದ್ಘಾಟನೆಯನ್ನು ಹಿರಿಯ ಸಾಹಿತಿ ಡಾ.ಯು.ಆರ್ ಅನಂತ ಮೂರ್ತಿ ವಹಿಸುವರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ, ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಮೂಡಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್ , ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಅತಿಥಿಗಳಾಗಿ ಪಾಲ್ಗೊಳ್ಳುವರು.ಉದ್ಘಾಟನಾ ಸಮಾರಂಭಕ್ಕೆ ಮೊದಲು ಸಮ್ಮೇಳನಾಧ್ಯಕ್ಷರನ್ನೊಳಗೊಂಡಂತೆ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ.

ಆಳ್ವಾಸ್ ನುಡಿಸಿರಿಯ ಸರ್ವಾಧ್ಯಕ್ಷತೆ ವಹಿಸಿರುವ ಹಿರಿಯ ಕವಿ ನಾಡೋಜ ಕೆ.ಎಸ್.ನಿಸಾರ್ ಅಹಮದ್ ಉದ್ಘಾಟನೆಯ ನಂತರ 11ಗಂಟೆಯಿಂದ ಆಶಯ ಭಾಷಣ ಮಾಡಲಿದ್ದಾರೆ. ಅಧ್ಯಕ್ಷರ ಭಾಷಣಕ್ಕೆ ವಿಶೇಷ ಅವಧಿ ನಿಗಧಿ ಪಡಿಸಿರುವುದು ಸಮ್ಮೇಳನದ ವಿಶೇಷ. ಆಳ್ವಾಸ್ ನುಡಿಸಿರಿ 2011ರ ನೆನಪಿನ ಸಂಚಿಕೆ "ಕನ್ನಡ ಮನಸ್ಸು : ಸಂಘರ್ಷ ಮತ್ತು ಸಾಮರಸ್ಯ" ಇದರ ಅನಾವರಣ ಇದೇ ಸಂದರ್ಭದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ನುಡಿಸಿರಿ - 2012ರ ಸ್ವಾಗತ ಸಮಿತಿ ಕಾರ್ಯದರ್ಶಿಗಳಾದ ಹರೀಶ್ ಕೆ.ಆದೂರು, ಡಾ.ಧನಂಜಯ ಕುಂಬ್ಳೆ ಮತ್ತು ಅನು ಬೆಳ್ಳೆ ಉಪಸ್ಥಿತರಿದ್ದರು.

0 comments:

Post a Comment