ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಪ್ರಾದೇಶಿಕ ಸುದ್ದಿ: ಮಂಗಳೂರು ವರದಿ
ಪಿಂಗಾರ ರಾಜ್ಯೋತ್ಸವ ಪ್ರಶಸ್ತಿ - 2012ನ್ನು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ ಜಯ ಸಿ.ಸುವರ್ಣ ಅವರಿಗೆ ನವೆಂಬರ್ 20ರಂದು ಮಂಗಳೂರು ಪುರಭವನದಲ್ಲಿ ನೀಡಿ ಗೌರವಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಅಲೋಶಿಯಸ್ ಪಾವ್ಲ್ ಡಿ'ಸೋಜ ಪ್ರಶಸ್ತಿ ನೀಡಿದರು. ಅಧ್ಯಕ್ಷತೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ಕೆ.ಲಕ್ಷ್ಮೀನಾರಾಯಣ ಆಸ್ರಣ್ಣ ವಹಿಸಿದ್ದರು. ಮುಲ್ಕಿ ಮೂಡಬಿದ್ರೆ ಶಾಸಕ ಕೆ.ಅಭಯಚಂದ್ರ ಜೈನ್, ಉದ್ಯಮಿ ವಿ.ಪಿ.ಲೋಬೋ, ಮಂಗಳೂರು ದಕ್ಷಿಣ ವಲಯ ಬಿ.ಜೆ.ಪಿ ಅಧ್ಯಕ್ಷ ಶ್ರೀಕರ ಪ್ರಭು ಉಪಸ್ಥಿತರಿದ್ದರು.

0 comments:

Post a Comment