ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಕಳೆದ ಎರಡು ದಿನಗಳಿಂದ ಮೂಡಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ರವಿವಾರ ಹೊತ್ತು ಕಂತುವ ಹೊತ್ತಿಗೆ ಸಮಾಪ್ತಿಗೊಂಡಿತು. ಆಳ್ವಾಸ್ ನುಡಿಸಿರಿ ರಾಷ್ಟ್ರೀಯ ಪ್ರಶಸ್ತಿಯನ್ನು ಹತ್ತು ಮಂದಿ ಗಣ್ಯರಿಗೆ ನೀಡುವುದರೊಂದಿಗೆ ಈ ಬಾರಿಯ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಸಮಾಪ್ತಿಯಾಗುವಂತಾಯಿತು. ಡಾ.ಅಲೋಶಿಯಸ್ ಪಾವ್ಲ್ ಡಿ ಸೋಜ, ಶ್ರೀ ಪಂಡಿತಾಚಾರ್ಯ ಶಿವಾಚಾರ್ಯ ಸ್ವಾಮೀಜಿ, ಡಾ.ಸಿ.ಪಿ.ಕೃಷ್ಣ ಕುಮಾರ್, ಗಿರೀಶ್ ಕಾಸರವಳ್ಳಿ , ಡಾ.ಸಿದ್ಧಲಿಂಗಯ್ಯ, ವೈಜಯಂತಿ ಕಾಶಿ, ರಾಮಚಂದ್ರ ಹೆಗಡೆ ಚಿಟ್ಟಾಣಿ, ಡಾ.ವಿಷ್ಣುನಾಯ್ಕ, ಸುಭದ್ರಮ್ಮ ಮನ್ಸೂರು ಹಾಗೂ ಲೋಕಶಿಕ್ಷಣ ಟ್ರಸ್ಟ್ ಧರ್ಮದರ್ಶಿ ಹಾರನಹಳ್ಳಿ ಅಶೋಕ್ ಇವರಿಗೆ ಈ ಬಾರಿಯ ಆಳ್ವಾಸ್ ನುಡಿಸಿರಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

0 comments:

Post a Comment