ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಮೂಡಬಿದಿರೆ:ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮದ ಆಚರಣೆ ನಡೆಯಿತು. ಉತ್ತರ ಭಾರತದಿಂದ ಬಂದ ಹೆಚ್ಚಿನ ಸಂಖ್ಯೆಯ ಜೈನ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಭಾರತ ವರ್ಷೀಯ ದಿಗಂಬರ ಜೈನ ತೀರ್ಥ ಕ್ಷೇತ್ರ ಕಮಿಟಿ ಮತ್ತು ಧವಲತ್ರಯ ಜೈನಕಾಶಿ ಟ್ರಸ್ಟ್ , ಜೈನ ಮಠ ಮೂಡಬಿದಿರೆ ಇದರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಜೈನ ಸಂಸ್ಕೃತಿ ಮತ್ತು ಪರಂಪರೆಯ ಉತ್ಸವ ಸಂವಾದ - 2013 ಸಾವಿರ ಕಂಬದ ಬಸದಿ ಆವರಣದಲ್ಲಿ ನಡೆಯುತ್ತಿದೆ. ದ್ವಿತೀಯ ದಿನದ ಕಾರ್ಯಕ್ರಮದ ನಂತರ ರಾತ್ರಿ ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ರಾತ್ರಿ ಭೈರಾದೇವಿ ಮಂಟಪದಲ್ಲಿ ಎಂ.ಕೆ.ನಿರ್ಮಲ್ ಕುಮಾರ್ ಮತ್ತು ಡಾ.ಎಸ್.ಪಿ. ವಿದ್ಯಾಕುಮಾರ್ ಅವರಿಂದ ಉಪನ್ಯಾಸಕಾರ್ಯಕ್ರಮಗಳು ನಡೆದವು.
ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಸಂಪನ್ನಗೊಂಡವು.0 comments:

Post a Comment