ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...

ಚಿಕ್ಕಮಗಳೂರು: ಟಿ.ವಿ.9 ಸುದ್ದಿ ವಾಹಿನಿಯ ದಾವಣಗೆರೆ ವರದಿಗಾರ ಸನತ್ ಭಟ್ ಇನ್ನಿಲ್ಲ. ದಾವಣಗೆರೆಯಿಂದ ದ್ವಿಚಕ್ರ ವಾಹನದಲ್ಲಿ ಮೂಡಬಿದಿರೆಗೆ ಆಗಮಿಸುತ್ತಿದ್ದ ವೇಳೆ ಚಿಕ್ಕಮಗಳೂರು ಘಾಟಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಆಲ್ಟೋ ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ಈ ಅಪಘಾತ ನಡೆದಿದೆ. ಸನತ್ ಭಟ್ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಯಾಗಿದ್ದರು. ಉಜಿರೆಯ ಎಸ್.ಡಿ.ಎಂ.ಕಾಲೇಜಿನಲ್ಲಿ ತನ್ನ ಸ್ನಾತಕೋತ್ತರ ಪದವಿ ಪೂರೈಸಿ ಟಿ.ವಿ.9 ವಾಹಿನಿಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

0 comments:

Post a Comment