ಈ ಕನಸು

ಇದು ವರ್ಷದ ಕನಸು

ನಮ್ಮ ಸಹೋದರ ಸಂಸ್ಥೆ ವಾರ್ತೆ.ಕಾಂ ನಲ್ಲಿ ಇತ್ತೀಚಿನ ಸುದ್ದಿ/ವಿಶೇಷ ವರದಿಗಳನ್ನು ವೀಕ್ಷಿಸಬಹುದು...


ರಾಷ್ಟ್ರೀಯ ಪ್ರತಿನಿಧಿ ವರದಿ

ಯೋಧರು ಹಾಗೂ ನಕ್ಸಲರ ನಡುವೆ ಭಾರಿ ಗುಂಡಿನ ಚಕಮಕಿ ನಡೆದ ಪರಿಣಾಮ ಇಬ್ಬರು ಬಿಎಸ್ಎಫ್ ಯೋಧರು ಹುತಾತ್ಮರಾಗಿರುವ ಘಟನೆ ಛತ್ತೀಸ್ ಗಡದ ಕಾಂಕರ್ ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.ನಕ್ಸಲರು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಕುರಿತಂತೆ ಮಾಹಿತಿ ತಿಳಿದಿದ್ದ ಬಿಎಸ್ ಎಫ್ ಯೋಧರು ನಿನ್ನೆ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಯೋಧರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಘಟನೆ ವೇಳೆ 6 ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಇವರಲ್ಲಿ ಇಬ್ಬರಿಗೆ ಚಿಕಿತ್ಸೆಗಾಗಿ ಹೆಲಿಕಾಪ್ಟರ್ ಮೂಲಕ ಸಾಗಿಸುವಾಗ ಇಬ್ಬರು ಯೋಧರು ವೀರಮರಣವನ್ನಪ್ಪಿದ್ದಾರೆ. ಗಾಯಗೊಂಡಿರುವ ಉಳಿದ ನಾಲ್ವರು ಯೋಧರಿಗೆ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಚಿತ್ರಃ ಸಾಂದರ್ಭಿಕ

0 comments:

Post a Comment